3. {#3ಶತ್ರುಬಾಧಿತನಾದ ಸದ್ಭಕ್ತನ ವಿಜ್ಞಾಪನೆಯೂ ಸ್ತೋತ್ರವೂ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. *[PE][QS]ದೇವರೇ, ಕರುಣಿಸು, ನನ್ನನ್ನು ಕರುಣಿಸು. [QE][QS]ನೀನೇ ನನ್ನ ಆಶ್ರಯಸ್ಥಾನವಲ್ಲವೇ! [QE][QS]ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. [QE]
2. [QS]ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, [QE][QS]ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು. [QE]
3. [QS]ಆತನು ಪರಲೋಕದಿಂದ ಆಲಿಸಿ, [QE][QS]ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; [QE][QSS]ಸೆಲಾ [QSE] [QS]ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು. [QE]
4. [QS]ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; [QE][QS]ದುರಾಶೆಯಿಂದ ಕಬಳಿಸುವಂತಹ[* ದುರಾಶೆಯಿಂದ ಕಬಳಿಸುವಂತಹ ಅಥವಾ ಬೆಂಕಿಕಾರುವ. ] ಮನುಷ್ಯರ ನಡುವೆ ಬಿದ್ದಿದ್ದೇನೆ. [QE][QS]ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, [QE][QS]ನಾಲಿಗೆಗಳು ಹದವಾದ ಕತ್ತಿಗಳೇ. [QE]
5. [QS]ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; [QE][QS]ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. [QE]
6. [QS]ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; [QE][QS]ನನ್ನ ಪ್ರಾಣವು ಕುಂದಿಹೋಯಿತು. [QE][QS]ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; [QE][QS]ತಾವೇ ಅದರಲ್ಲಿ ಬಿದ್ದುಹೋದರು. [QE][QSS]ಸೆಲಾ [QSE]
7. [QS]ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. [QE][QS]ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು. [QE]
8. [QS]ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. [QE][QS]ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. [QE]
9. [QS]ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; [QE][QS]ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. [QE]
10. [QS]ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, [QE][QS]ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ. [QE]
11. [QS]ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; [QE][QS]ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. [QE]