1. ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು;
ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು. |
3. ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ;
ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ! |
5. ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ,
ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ |
7. ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ;
ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ. |
10. ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು;
ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು. |
11. ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ.
ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು. |
13. ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ,
ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. * ಅಥವಾ ಇಸ್ರಾಯೇಲ ದೇಶವನ್ನು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ |
15. ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ;
ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ † ಗುಣುಗುಟ್ಟುತ್ತಾರೆ ಅಥವಾ ರಾತ್ರಿಯೆಲ್ಲಾ ಗುಣುಗುಟ್ಟುತ್ತಾರೆ. . |
16. ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ
ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. |