3. {#3ಹಿಂಸೆಗೊಳಗಾದ ನಿರಪರಾಧಿಯ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ. *[PE][QS]ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; [QE][QS]ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು. [QE]
2. [QS]ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. [QE]
3. [QS]ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; [QE][QS]ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. [QE][QS]ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ! [QE]
4. [QS]ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; [QE][QS]ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು. [QE]
5. [QS]ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, [QE][QS]ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. [QE][QS]ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. [QE][QSS]ಸೆಲಾ [QSE]
6. [QS]ಅವರು ಪ್ರತಿಸಾಯಂಕಾಲವೂ ಬಂದು ಬಂದು [QE][QS]ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ. [QE]
7. [QS]ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; [QE][QS]ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, [QE][QS]ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ. [QE]
8. [QS]ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; [QE][QS]ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ. [QE]
9. [QS]ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. [QE][QS]ನನ್ನ ಆಶ್ರಯದುರ್ಗವು ದೇವರೇ. [QE]
10. [QS]ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; [QE][QS]ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು. [QE]
11. [QS]ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. [QE][QS]ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. [QE][QS]ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು. [QE]
12. [QS]ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. [QE][QS]ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ. [QE]
13. [QS]ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, [QE][QS]ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. [QE][QS][* ಅಥವಾ ಇಸ್ರಾಯೇಲ ದೇಶವನ್ನು. ]ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, [QE][QS]ಭೂಲೋಕದಲ್ಲೆಲ್ಲಾ ಗೊತ್ತಾಗಲಿ. [QE][QSS]ಸೆಲಾ [QSE]
14. [QS]ಅವರು ಪ್ರತಿಸಾಯಂಕಾಲವೂ ಬಂದು ಬಂದು, [QE][QS]ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ. [QE]
15. [QS]ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; [QE][QS]ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ[† ಗುಣುಗುಟ್ಟುತ್ತಾರೆ ಅಥವಾ ರಾತ್ರಿಯೆಲ್ಲಾ ಗುಣುಗುಟ್ಟುತ್ತಾರೆ. ]. [QE]
16. [QS]ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ [QE][QS]ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; [QE][QS]ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. [QE]
17. [QS]ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, [QE][QS]ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ. [QE]