1. ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; [QBR] ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು. [QBR]
2. ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. [QBR]
3. ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; [QBR] ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. [QBR] ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ! [QBR]
4. ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; [QBR] ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು. [QBR]
5. ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, [QBR] ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. [QBR] ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ
6. ಅವರು ಪ್ರತಿಸಾಯಂಕಾಲವೂ ಬಂದು ಬಂದು [QBR] ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ. [QBR]
7. ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; [QBR] ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, [QBR] ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ. [QBR]
8. ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; [QBR] ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ. [QBR]
9. ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. [QBR] ನನ್ನ ಆಶ್ರಯದುರ್ಗವು ದೇವರೇ. [QBR]
10. ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; [QBR] ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು. [QBR]
11. ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. [QBR] ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. [QBR] ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು. [QBR]
12. ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. [QBR] ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ. [QBR]
13. ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, [QBR] ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. [QBR] [* ಅಥವಾ ಇಸ್ರಾಯೇಲ ದೇಶವನ್ನು.] ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, [QBR] ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ
14. ಅವರು ಪ್ರತಿಸಾಯಂಕಾಲವೂ ಬಂದು ಬಂದು, [QBR] ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ. [QBR]
15. ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; [QBR] ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ [† ಗುಣುಗುಟ್ಟುತ್ತಾರೆ ಅಥವಾ ರಾತ್ರಿಯೆಲ್ಲಾ ಗುಣುಗುಟ್ಟುತ್ತಾರೆ.] . [QBR]
16. ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ [QBR] ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; [QBR] ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. [QBR]
17. ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, [QBR] ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ. [PE]