ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; [QBR] ರೋಷದಿಂದ ನನ್ನನ್ನು ದಂಡಿಸಬೇಡ. [QBR]
2. ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. [QBR] ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ. [QBR]
3. ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. [QBR] ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ? [QBR]
4. ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; [QBR] ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು. [QBR]
5. ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; [QBR] ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? [QBR]
6. ನಾನು ನರಳಿ ನರಳಿ ದಣಿದಿದ್ದೇನೆ; [QBR] ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. [QBR] ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ. [QBR]
7. ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; [QBR] ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು. [QBR]
8. ಧರ್ಮವನ್ನು ಮೀರಿ ನಡೆಯುವವರೇ, [QBR] ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; [QBR] ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. [QBR]
9. ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; [QBR] ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು. [QBR]
10. ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; [QBR] ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 150
ಕೀರ್ತನೆಗಳು 6:56
1 ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ. 3 ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ? 4 ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು. 5 ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? 6 ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ. 7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು. 8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. 9 ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು. 10 ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 150
Common Bible Languages
West Indian Languages
×

Alert

×

kannada Letters Keypad References