ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಕಷ್ಟಪೀಡಿತನಾದ ಭಕ್ತನ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. *[PE][QS]ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; [QE][QS]ರೋಷದಿಂದ ನನ್ನನ್ನು ದಂಡಿಸಬೇಡ. [QE]
2. [QS]ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. [QE][QS]ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ. [QE]
3. [QS]ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. [QE][QS]ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ? [QE]
4. [QS]ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; [QE][QS]ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು. [QE]
5. [QS]ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; [QE][QS]ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? [QE]
6. [QS]ನಾನು ನರಳಿ ನರಳಿ ದಣಿದಿದ್ದೇನೆ; [QE][QS]ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. [QE][QS]ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ. [QE]
7. [QS]ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; [QE][QS]ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು. [QE]
8. [QS]ಧರ್ಮವನ್ನು ಮೀರಿ ನಡೆಯುವವರೇ, [QE][QS]ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; [QE][QS]ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. [QE]
9. [QS]ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; [QE][QS]ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು. [QE]
10. [QS]ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; [QE][QS]ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 150
ಕಷ್ಟಪೀಡಿತನಾದ ಭಕ್ತನ ಪ್ರಾರ್ಥನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. *ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ. 3 ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ? 4 ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು. 5 ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? 6 ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ. 7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು. 8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. 9 ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು. 10 ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 150
×

Alert

×

Kannada Letters Keypad References