ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; [QBR] ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; [QBR] ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು. [QBR]
2. ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; [QBR] ಅದು ನಡುಗುತ್ತಿರುವುದಲ್ಲಾ. [QBR] ಅದರ ಒಡಕುಗಳನ್ನು ಸರಿಮಾಡು; [QBR]
3. ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; [QBR] ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ. [QBR]
4. ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, [QBR] ಆದ್ದರಿಂದ ಅವರು ಬಿಲ್ಲಿನಿಂದ [* ಬಿಲ್ಲಿನಿಂದ ಅಥವಾ ಸತ್ಯದ ನಿಮಿತ್ತ ಅವರು ತಪ್ಪಿಸಿಕೊಳ್ಳುತ್ತಾರೆ.] ತಪ್ಪಿಸಿಕೊಳ್ಳಬಹುದು. ಸೆಲಾ
5. ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. [QBR] ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. [QBR]
6. ದೇವರು ತನ್ನ ಪವಿತ್ರಸ್ಥಳದಲ್ಲಿ [† ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ. ] ನುಡಿದಿದ್ದಾನೆ. [QBR] ಜಯಘೋಷಮಾಡುವೆನು; [QBR] ಶೆಖೆಮ್ ಪ್ರದೇಶವನ್ನು ಹಂಚುವೆನು. [QBR] ಸುಖೋತ್ ಬಯಲನ್ನು ಅಳೆದುಕೊಡುವೆನು. [QBR]
7. ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; [QBR] ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. [QBR] ನನ್ನ ರಾಜದಂಡವು ಯೆಹೂದ ಕುಲವೇ. [QBR]
8. ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; [QBR] ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. [QBR] [‡ ಓ ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ.] ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು. [QBR]
9. ಕೋಟೆಕೊತ್ತಲುಗಳುಳ್ಳ ನಗರಕ್ಕೆ [QBR] ನನ್ನನ್ನು ಕರೆದುಕೊಂಡು ಹೋಗುವವರು ಯಾರು? [QBR] ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? [QBR]
10. ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! [QBR] ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ? [QBR]
11. ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; [QBR] ಮನುಷ್ಯರ ಸಹಾಯವು ವ್ಯರ್ಥ. [QBR]
12. ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; [QBR] ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 60 / 150
ಕೀರ್ತನೆಗಳು 60:136
1 ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು. 2 ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು; 3 ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ. 4 ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ * ಬಿಲ್ಲಿನಿಂದ ಅಥವಾ ಸತ್ಯದ ನಿಮಿತ್ತ ಅವರು ತಪ್ಪಿಸಿಕೊಳ್ಳುತ್ತಾರೆ. ತಪ್ಪಿಸಿಕೊಳ್ಳಬಹುದು. ಸೆಲಾ 5 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. 6 ದೇವರು ತನ್ನ ಪವಿತ್ರಸ್ಥಳದಲ್ಲಿ ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ. ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು. 7 ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ. 8 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಓ ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು. 9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? 10 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ? 11 ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ. 12 ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 60 / 150
Common Bible Languages
West Indian Languages
×

Alert

×

kannada Letters Keypad References