ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಅಪಜಯ ಹೊಂದಿದವರು ಜಯಕ್ಕಾಗಿ ಪ್ರಾರ್ಥಿಸುವುದು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. *[PE][QS]ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; [QE][QS]ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; [QE][QS]ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು. [QE]
2. [QS]ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; [QE][QS]ಅದು ನಡುಗುತ್ತಿರುವುದಲ್ಲಾ. [QE][QS]ಅದರ ಒಡಕುಗಳನ್ನು ಸರಿಮಾಡು; [QE]
3. [QS]ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; [QE][QS]ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ. [QE]
4. [QS]ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, [QE][QS]ಆದ್ದರಿಂದ ಅವರು ಬಿಲ್ಲಿನಿಂದ[* ಬಿಲ್ಲಿನಿಂದ ಅಥವಾ ಸತ್ಯದ ನಿಮಿತ್ತ ಅವರು ತಪ್ಪಿಸಿಕೊಳ್ಳುತ್ತಾರೆ. ] ತಪ್ಪಿಸಿಕೊಳ್ಳಬಹುದು. [QE][QSS]ಸೆಲಾ [QSE]
5. [QS]ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. [QE][QS]ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. [QE]
6. [QS]ದೇವರು ತನ್ನ ಪವಿತ್ರಸ್ಥಳದಲ್ಲಿ[† ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ. ] ನುಡಿದಿದ್ದಾನೆ. [QE][QS]ಜಯಘೋಷಮಾಡುವೆನು; [QE][QS]ಶೆಖೆಮ್ ಪ್ರದೇಶವನ್ನು ಹಂಚುವೆನು. [QE][QS]ಸುಖೋತ್ ಬಯಲನ್ನು ಅಳೆದುಕೊಡುವೆನು. [QE]
7. [QS]ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; [QE][QS]ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. [QE][QS]ನನ್ನ ರಾಜದಂಡವು ಯೆಹೂದ ಕುಲವೇ. [QE]
8. [QS]ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; [QE][QS]ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. [QE][QS][‡ ಓ ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ. ]ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು. [QE]
9. [QS]ಕೋಟೆಕೊತ್ತಲುಗಳುಳ್ಳ ನಗರಕ್ಕೆ [QE][QS]ನನ್ನನ್ನು ಕರೆದುಕೊಂಡು ಹೋಗುವವರು ಯಾರು? [QE][QS]ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? [QE]
10. [QS]ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! [QE][QS]ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ? [QE]
11. [QS]ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; [QE][QS]ಮನುಷ್ಯರ ಸಹಾಯವು ವ್ಯರ್ಥ. [QE]
12. [QS]ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; [QE][QS]ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 60 / 150
ಅಪಜಯ ಹೊಂದಿದವರು ಜಯಕ್ಕಾಗಿ ಪ್ರಾರ್ಥಿಸುವುದು 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. *ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು. 2 ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು; 3 ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ. 4 ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ* ಬಿಲ್ಲಿನಿಂದ ಅಥವಾ ಸತ್ಯದ ನಿಮಿತ್ತ ಅವರು ತಪ್ಪಿಸಿಕೊಳ್ಳುತ್ತಾರೆ. ತಪ್ಪಿಸಿಕೊಳ್ಳಬಹುದು. QSS ಸೆಲಾ SE 5 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. 6 ದೇವರು ತನ್ನ ಪವಿತ್ರಸ್ಥಳದಲ್ಲಿ ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ. ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು. 7 ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ. 8 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಓ ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು. 9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? 10 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ? 11 ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ. 12 ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 60 / 150
×

Alert

×

Kannada Letters Keypad References