ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಸದ್ಭಕ್ತರು ತಮಗಾಗಿಯೂ ತಮ್ಮ ರಾಜನಿಗಾಗಿಯೂ ಮಾಡುವ ವಿಜ್ಞಾಪನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. *[PE][QS]ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. [QE]
2. [QS]ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; [QE][QS]ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. [QE]
3. [QS]ನೀನು ನನಗೆ ಶರಣನೂ, [QE][QS]ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. [QE]
4. [QS]ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; [QE][QS]ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. [QE][QSS]ಸೆಲಾ [QSE]
5. [QS]ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; [QE][QS]ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. [QE]
6. [QS]ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; [QE][QS]ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ. [QE]
7. [QS]ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, [QE][QS]ಸದಾಕಾಲವೂ ಸಿಂಹಾಸನಾರೂಢನಾಗಿರಲಿ; [QE][QS]ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. [QE]
8. [QS]ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, [QE][QS]ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 61 / 150
ಸದ್ಭಕ್ತರು ತಮಗಾಗಿಯೂ ತಮ್ಮ ರಾಜನಿಗಾಗಿಯೂ ಮಾಡುವ ವಿಜ್ಞಾಪನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. *ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. 2 ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. 3 ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. 4 ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. QSS ಸೆಲಾ SE 5 ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. 6 ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ. 7 ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. 8 ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 61 / 150
×

Alert

×

Kannada Letters Keypad References