2. ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ;
ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. |
4. ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ;
ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ |
5. ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ;
ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. |
7. ಅವನು ನಿನ್ನ ಸಾನ್ನಿಧ್ಯವನ್ನು ಪಡೆದು,
ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. |
8. ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ,
ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು. PE |