ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. [QBR]
2. ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; [QBR] ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. [QBR]
3. ನೀನು ನನಗೆ ಶರಣನೂ, [QBR] ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. [QBR]
4. ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; [QBR] ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ
5. ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; [QBR] ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. [QBR]
6. ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; [QBR] ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ. [QBR]
7. ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, [QBR] ಸದಾಕಾಲವೂ ಸಿಂಹಾಸನಾರೂಢನಾಗಿರಲಿ; [QBR] ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. [QBR]
8. ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, [QBR] ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 61 / 150
ಕೀರ್ತನೆಗಳು 61:8
1 ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. 2 ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. 3 ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. 4 ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ 5 ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. 6 ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ. 7 ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. 8 ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 61 / 150
Common Bible Languages
West Indian Languages
×

Alert

×

kannada Letters Keypad References