ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. [QBR] ನನ್ನ ರಕ್ಷಣೆಯು ಆತನಿಂದಲೇ. [QBR]
2. ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; [QBR] ನಾನು ಕದಲಿದರೂ ಬೀಳೆನು. [QBR]
3. ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, [QBR] ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ [QBR] ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ? [QBR]
4. ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. [QBR] ಸುಳ್ಳಾಡುವುದು ಅವರಿಗೆ ಅತಿಸಂತೋಷ; [QBR] ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ
5. ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. [QBR] ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. [QBR]
6. ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; [QBR] ನಾನು ಕದಲುವುದಿಲ್ಲ. [QBR]
7. ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; [QBR] ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. [QBR]
8. ಜನರೇ, ಯಾವಾಗಲೂ ಆತನನ್ನೇ ನಂಬಿ, [QBR] ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; [QBR] ದೇವರು ನಮ್ಮ ಆಶ್ರಯವು. ಸೆಲಾ
9. ನರರು ಬರೀ ಉಸಿರೇ; [QBR] ನರಾಧಿಪತಿಗಳು ಬರೀ ಮಾಯವೇ. [QBR] ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ. [QBR]
10. ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; [QBR] ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; [QBR] ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. [QBR]
11. ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, [QBR] ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. [QBR]
12. ಕರ್ತನೇ, ನೀನು ಪ್ರೀತಿಸ್ವರೂಪನಾಗಿ [QBR] ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 62 / 150
ಕೀರ್ತನೆಗಳು 62:76
1 ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ. 2 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು. 3 ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ? 4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ 5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. 6 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ. 7 ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. 8 ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ 9 ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ. 10 ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. 11 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. 12 ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 62 / 150
Common Bible Languages
West Indian Languages
×

Alert

×

kannada Letters Keypad References