ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಭಕ್ತನು ದೇವದರ್ಶನವನ್ನು ಹಂಬಲಿಸಿ ಸಂತೃಪ್ತಿಹೊಂದಿದ್ದು }[PS]*ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. *[PE][QS]ದೇವರೇ, ನೀನೇ ನನ್ನ ದೇವರು; [QE][QS]ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. [QE][QS]ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; [QE][QS]ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, [QE][QS]ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ. [QE]
2. [QS]ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, [QE][QS]ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. [QE]
3. [QS]ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; [QE][QS]ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು. [QE]
4. [QS]ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, [QE][QS]ನಿನ್ನ ಹೆಸರೆತ್ತಿ ಕೈಮುಗಿಯುವೆನು. [QE]
5. [QS]ಮೃಷ್ಟಭೋಜನದಿಂದಲೋ ಎಂಬಂತೆ, [QE][QS]ನನ್ನ ಮನಸ್ಸು ಸಂತುಷ್ಟವಾಗಿರುವುದು; [QE][QS]ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು. [QE]
6. [QS]ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, [QE][QS]ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು. [QE]
7. [QS]ನೀನು ನನಗೆ ಸಹಾಯಕನಾಗಿರುವೆಯಲ್ಲಾ; [QE][QS]ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, [QE][QS]ಆನಂದಘೋಷ ಮಾಡುತ್ತಿರುವೆನು. [QE]
8. [QS]ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; [QE][QS]ನಿನ್ನ ಬಲಗೈ ನನಗೆ ಆಧಾರವಾಗಿರುವುದು. [QE]
9. [QS]ನನ್ನ ಜೀವಕ್ಕೆ ಕೇಡು ಬಗೆಯುವವರೋ, [QE][QS]ಅಧೋಲೋಕಕ್ಕೆ ಇಳಿದುಹೋಗುವರು. [QE]
10. [QS]ಅವರು ಕತ್ತಿಗೆ ಬಲಿಯಾಗುವರು; [QE][QS]ನರಿಗಳ ಪಾಲಾಗುವರು. [QE]
11. [QS]ಆದರೆ ಅರಸನೋ ದೇವರಲ್ಲಿ ಆನಂದಿಸುವನು, [QE][QS]ದೇವರ ಮೇಲೆ ಆಣೆಯಿಡುವವರೆಲ್ಲರು [QE][QS]ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 63 / 150
ಭಕ್ತನು ದೇವದರ್ಶನವನ್ನು ಹಂಬಲಿಸಿ ಸಂತೃಪ್ತಿಹೊಂದಿದ್ದು 3 ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ. 2 ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. 3 ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು. 4 ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು. 5 ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು. 6 ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು. 7 ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು. 8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು. 9 ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು. 10 ಅವರು ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು. 11 ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 63 / 150
×

Alert

×

Kannada Letters Keypad References