1. ದೇವರೇ, ನೀನೇ ನನ್ನ ದೇವರು; [QBR] ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. [QBR] ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; [QBR] ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, [QBR] ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ. [QBR]
2. ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, [QBR] ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. [QBR]
3. ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; [QBR] ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು. [QBR]
4. ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, [QBR] ನಿನ್ನ ಹೆಸರೆತ್ತಿ ಕೈಮುಗಿಯುವೆನು. [QBR]
5. ಮೃಷ್ಟಭೋಜನದಿಂದಲೋ ಎಂಬಂತೆ, [QBR] ನನ್ನ ಮನಸ್ಸು ಸಂತುಷ್ಟವಾಗಿರುವುದು; [QBR] ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು. [QBR]
6. ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, [QBR] ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು. [QBR]
7. ನೀನು ನನಗೆ ಸಹಾಯಕನಾಗಿರುವೆಯಲ್ಲಾ; [QBR] ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, [QBR] ಆನಂದಘೋಷ ಮಾಡುತ್ತಿರುವೆನು. [QBR]
8. ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; [QBR] ನಿನ್ನ ಬಲಗೈ ನನಗೆ ಆಧಾರವಾಗಿರುವುದು. [QBR]
9. ನನ್ನ ಜೀವಕ್ಕೆ ಕೇಡು ಬಗೆಯುವವರೋ, [QBR] ಅಧೋಲೋಕಕ್ಕೆ ಇಳಿದುಹೋಗುವರು. [QBR]
10. ಅವರು ಕತ್ತಿಗೆ ಬಲಿಯಾಗುವರು; [QBR] ನರಿಗಳ ಪಾಲಾಗುವರು. [QBR]
11. ಆದರೆ ಅರಸನೋ ದೇವರಲ್ಲಿ ಆನಂದಿಸುವನು, [QBR] ದೇವರ ಮೇಲೆ ಆಣೆಯಿಡುವವರೆಲ್ಲರು [QBR] ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು. [PE]