ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಸಂರಕ್ಷಣೆಗಾಗಿ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *[PE][QS]ದೇವರೇ, ನನ್ನ ಸ್ವರವನ್ನು ಕೇಳಿ, [QE][QS]ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು. [QE]
2. [QS]ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, [QE][QS]ನನ್ನನ್ನು ತಪ್ಪಿಸಿ ಭದ್ರಪಡಿಸು. [QE]
3. [QS]ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; [QE][QS]ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ. [QE]
4. [QS]ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. [QE][QS]ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ. [QE]
5. [QS]ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು [QE][QS]ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; [QE][QS]ನಮ್ಮನ್ನು[* ನಮ್ಮನ್ನು ಅಥವಾ ಅವರನ್ನು. ] ನೋಡುವವರು ಯಾರು?” ಅಂದುಕೊಳ್ಳುತ್ತಾರೆ. [QE]
6. [QS]ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; [QE][QS]ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ. [QE]
7. [QS]ಆದರೆ ದೇವರು ಬಾಣವನ್ನು ಎಸೆಯಲು, [QE][QS]ಫಕ್ಕನೆ ಅವರಿಗೆ ಗಾಯವಾಗುವುದು. [QE]
8. [QS]ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; [QE][QS]ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು. [QE]
9. [QS]ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, [QE][QS]ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು. [QE]
10. [QS]ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; [QE][QS]ಸರಳಹೃದಯದವರೆಲ್ಲರೂ ಹಿಗ್ಗುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 64 / 150
ಸಂರಕ್ಷಣೆಗಾಗಿ ಪ್ರಾರ್ಥನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು. 2 ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು. 3 ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ. 4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ. 5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು* ನಮ್ಮನ್ನು ಅಥವಾ ಅವರನ್ನು. ನೋಡುವವರು ಯಾರು?” ಅಂದುಕೊಳ್ಳುತ್ತಾರೆ. 6 ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ. 7 ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು. 8 ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು. 9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು. 10 ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 64 / 150
×

Alert

×

Kannada Letters Keypad References