ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರೇ, ನನ್ನ ಸ್ವರವನ್ನು ಕೇಳಿ, [QBR] ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು. [QBR]
2. ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, [QBR] ನನ್ನನ್ನು ತಪ್ಪಿಸಿ ಭದ್ರಪಡಿಸು. [QBR]
3. ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; [QBR] ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ. [QBR]
4. ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. [QBR] ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ. [QBR]
5. ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು [QBR] ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; [QBR] ನಮ್ಮನ್ನು [* ನಮ್ಮನ್ನು ಅಥವಾ ಅವರನ್ನು.] ನೋಡುವವರು ಯಾರು?” ಅಂದುಕೊಳ್ಳುತ್ತಾರೆ. [QBR]
6. ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; [QBR] ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ. [QBR]
7. ಆದರೆ ದೇವರು ಬಾಣವನ್ನು ಎಸೆಯಲು, [QBR] ಫಕ್ಕನೆ ಅವರಿಗೆ ಗಾಯವಾಗುವುದು. [QBR]
8. ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; [QBR] ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು. [QBR]
9. ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, [QBR] ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು. [QBR]
10. ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; [QBR] ಸರಳಹೃದಯದವರೆಲ್ಲರೂ ಹಿಗ್ಗುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 64 / 150
ಕೀರ್ತನೆಗಳು 64:131
1 ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು. 2 ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು. 3 ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ. 4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ. 5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು * ನಮ್ಮನ್ನು ಅಥವಾ ಅವರನ್ನು. ನೋಡುವವರು ಯಾರು?” ಅಂದುಕೊಳ್ಳುತ್ತಾರೆ. 6 ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ. 7 ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು. 8 ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು. 9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು. 10 ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 64 / 150
Common Bible Languages
West Indian Languages
×

Alert

×

kannada Letters Keypad References