1. ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; [QBR] ಹರಕೆಗಳು ನಿನಗೆ ಸಲ್ಲುತ್ತವೆ. [QBR]
2. ಪ್ರಾರ್ಥನೆಯನ್ನು ಕೇಳುವವನೇ, [QBR] ನರರೆಲ್ಲರೂ ನಿನ್ನ ಬಳಿಗೆ ಬರುವರು. [QBR]
3. ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. [QBR] ಆದರೆ ನಮ್ಮ ದೋಷಪರಿಹಾರಕನು ನೀನೇ. [QBR]
4. ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, [QBR] ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, [QBR] ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. [QBR] ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ [QBR] ನಮಗೆ ಸಂತೃಪ್ತಿಯಾಗಲಿ. [QBR]
5. ನಮ್ಮ ರಕ್ಷಕನಾದ ದೇವರೇ, [QBR] ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, [QBR] ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. [QBR] ಭೂಮಿಯ ಎಲ್ಲಾ ಕಡೆಯವರ, [QBR] ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ [QBR] ನಂಬಿಕೆಗೆ ಆಧಾರನು ನೀನೇ. [QBR]
6. ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, [QBR] ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು. [QBR]
7. ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, [QBR] ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ. [QBR]
8. ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, [QBR] ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; [QBR] ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ. [QBR]
9. ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, [QBR] ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. [QBR] ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. [QBR]
10. ನೇಗಿಲಗೆರೆಗಳನ್ನು ತೇವಗೊಳಿಸಿ, [QBR] ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; [QBR] ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. [QBR]
11. ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; [QBR] ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ [QBR] ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು. [QBR]
12. ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; [QBR] ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ. [QBR]
13. ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; [QBR] ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; [QBR] ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ. [PE]