4. ನಿನ್ನ ಅಂಗಳದಲ್ಲಿ ವಾಸಿಸುವವರಾಗಿ,
ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ. |
5. ನಮ್ಮ ರಕ್ಷಕನಾದ ದೇವರೇ,
ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. |
8. ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ,
ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ. |
9. ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ,
ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. |
10. ನೇಗಿಲಗೆರೆಗಳನ್ನು ತೇವಗೊಳಿಸಿ,
ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. |
11. ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ;
ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು. |
13. ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ;
ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ. PE |