3. {#3ಲೋಕಪರಿಪಾಲನೆ ಮತ್ತು ಫಲಸಮೃದ್ಧಿಗಾಗಿ ದೇವರನ್ನು ಸ್ತುತಿಸುವುದು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು. *[PE][QS]ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; [QE][QS]ಹರಕೆಗಳು ನಿನಗೆ ಸಲ್ಲುತ್ತವೆ. [QE]
2. [QS]ಪ್ರಾರ್ಥನೆಯನ್ನು ಕೇಳುವವನೇ, [QE][QS]ನರರೆಲ್ಲರೂ ನಿನ್ನ ಬಳಿಗೆ ಬರುವರು. [QE]
3. [QS]ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. [QE][QS]ಆದರೆ ನಮ್ಮ ದೋಷಪರಿಹಾರಕನು ನೀನೇ. [QE]
4. [QS]ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, [QE][QS]ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, [QE][QS]ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. [QE][QS]ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ [QE][QS]ನಮಗೆ ಸಂತೃಪ್ತಿಯಾಗಲಿ. [QE]
5. [QS]ನಮ್ಮ ರಕ್ಷಕನಾದ ದೇವರೇ, [QE][QS]ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, [QE][QS]ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. [QE][QS]ಭೂಮಿಯ ಎಲ್ಲಾ ಕಡೆಯವರ, [QE][QS]ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ [QE][QS]ನಂಬಿಕೆಗೆ ಆಧಾರನು ನೀನೇ. [QE]
6. [QS]ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, [QE][QS]ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು. [QE]
7. [QS]ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, [QE][QS]ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ. [QE]
8. [QS]ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, [QE][QS]ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; [QE][QS]ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ. [QE]
9. [QS]ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, [QE][QS]ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. [QE][QS]ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. [QE]
10. [QS]ನೇಗಿಲಗೆರೆಗಳನ್ನು ತೇವಗೊಳಿಸಿ, [QE][QS]ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; [QE][QS]ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. [QE]
11. [QS]ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; [QE][QS]ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ [QE][QS]ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು. [QE]
12. [QS]ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; [QE][QS]ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ. [QE]
13. [QS]ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; [QE][QS]ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; [QE][QS]ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ. [QE]