1. ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ. [QBR]
2. ಆತನ ನಾಮದ ಮಹತ್ತನ್ನು ಕೀರ್ತಿಸಿರಿ; [QBR] ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ. [QBR]
3. ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; [QBR] ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು; [QBR]
4. ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, [QBR] ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ
5. ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; [QBR] ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ. [QBR]
6. ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; [QBR] ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; [QBR] ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ. [QBR]
7. ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; [QBR] ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ
8. ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; [QBR] ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ. [QBR]
9. ಆತನು ನಮ್ಮನ್ನು ಜೀವದಿಂದುಳಿಸಿ, [QBR] ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು. [QBR]
10. ದೇವರೇ, ನಮ್ಮನ್ನು ಶೋಧಿಸಿದಿ; [QBR] ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ. [QBR]
11. ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; [QBR] ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ; [QBR]
12. ಮನುಷ್ಯರು ನಮ್ಮ ತಲೆಗಳ ಮೇಲೆಯೇ, [QBR] ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. [QBR] ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; [QBR] ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ. [QBR]
13. ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು. [QBR]
14. ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ [QBR] ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು. [QBR]
15. ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು [QBR] ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; [QBR] ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ
16. ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; [QBR] ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು. [QBR]
17. ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು. [QBR]
18. ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, [QBR] ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ. [QBR]
19. ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ. [QBR]
20. ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; [QBR] ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. [QBR] ದೇವರಿಗೆ ಸ್ತೋತ್ರವಾಗಲಿ. [PE]