3. {#3ದೇವರ ಮಹತ್ಕಾರ್ಯಗಳಿಗಾಗಿ ಸ್ತುತಿಸುವುದು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ. *[PE][QS]ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ. [QE]
2. [QS]ಆತನ ನಾಮದ ಮಹತ್ತನ್ನು ಕೀರ್ತಿಸಿರಿ; [QE][QS]ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ. [QE]
3. [QS]ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; [QE][QS]ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು; [QE]
4. [QS]ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, [QE][QS]ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. [QE][QSS]ಸೆಲಾ [QSE]
5. [QS]ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; [QE][QS]ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ. [QE]
6. [QS]ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; [QE][QS]ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; [QE][QS]ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ. [QE]
7. [QS]ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; [QE][QS]ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. [QE][QSS]ಸೆಲಾ [QSE]
8. [QS]ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; [QE][QS]ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ. [QE]
9. [QS]ಆತನು ನಮ್ಮನ್ನು ಜೀವದಿಂದುಳಿಸಿ, [QE][QS]ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು. [QE]
10. [QS]ದೇವರೇ, ನಮ್ಮನ್ನು ಶೋಧಿಸಿದಿ; [QE][QS]ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ. [QE]
11. [QS]ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; [QE][QS]ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ; [QE]
12. [QS]ಮನುಷ್ಯರು ನಮ್ಮ ತಲೆಗಳ ಮೇಲೆಯೇ, [QE][QS]ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. [QE][QS]ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; [QE][QS]ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ. [QE]
13. [QS]ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು. [QE]
14. [QS]ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ [QE][QS]ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು. [QE]
15. [QS]ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು [QE][QS]ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; [QE][QS]ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. [QE][QSS]ಸೆಲಾ [QSE]
16. [QS]ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; [QE][QS]ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು. [QE]
17. [QS]ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು. [QE]
18. [QS]ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, [QE][QS]ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ. [QE]
19. [QS]ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ. [QE]
20. [QS]ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; [QE][QS]ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. [QE][QS]ದೇವರಿಗೆ ಸ್ತೋತ್ರವಾಗಲಿ. [QE]