ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; [QBR] ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ
2. ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, [QBR] ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. [QBR]
3. ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; [QBR] ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. [QBR]
4. ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, [QBR] ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ [QBR] ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ
5. ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; [QBR] ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. [QBR]
6. ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. [QBR] ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; [QBR]
7. ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. [QBR] ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು. [PE]

Notes

No Verse Added

Total 150 Chapters, Current Chapter 67 of Total Chapters 150
ಕೀರ್ತನೆಗಳು 67:6
1. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ;
ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ
2. ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ,
ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
3. ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ;
ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
4. ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ,
ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ
ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ
5. ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ;
ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
6. ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ.
ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
7. ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ.
ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು. PE
Total 150 Chapters, Current Chapter 67 of Total Chapters 150
×

Alert

×

kannada Letters Keypad References