3. {#3ರಕ್ಷಕನಾದ ದೇವರ ಪ್ರತಾಪವರ್ಣನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ದಾವೀದನ ಕೀರ್ತನೆ; ಹಾಡು. [BR]ನ್ಯಾಯ 5; ಧರ್ಮೋ 33; ಹಬ 3 *[PE][QS]ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; [QE][QS]ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ. [QE]
2. [QS]ಹೊಗೆಯು ಗಾಳಿಯಿಂದ ಹೇಗೋ, [QE][QS]ಹಾಗೆ ಅವರು ಆತನಿಂದ ಹಾರಿಹೋಗಲಿ; [QE][QS]ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ, [QE][QS]ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ. [QE]
3. [QS]ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; [QE][QS]ಉಲ್ಲಾಸಿಸಲಿ, ಆನಂದಧ್ವನಿಮಾಡಲಿ. [QE]
4. [QS]ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; [QE][QS]ಅರಣ್ಯದಲ್ಲಿ ಸವಾರಿಮಾಡುತ್ತಾ[* ಅರಣ್ಯದಲ್ಲಿ ಸವಾರಿಮಾಡುತ್ತಾ ಅಥವಾ ಮೇಘಾರೂಢನಾಗಿ. ] ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. [QE][QS]ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ. [QE]
5. [QS]ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, [QE][QS]ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ. [QE]
6. [QS]ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; [QE][QS]ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. [QE][QS]ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು. [QE]
7. [QS]ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, [QE][QS]ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, [QE][QSS]ಸೆಲಾ [QSE]
8. [QS]ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; [QE][QS]ಮೇಘಮಂಡಲವು ಮಳೆಸುರಿಸಿತು. [QE][QS]ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, [QE][QS]ಆ ಸೀನಾಯ್ ಬೆಟ್ಟವು ಕದಲಿತು. [QE]
9. [QS]ದೇವರೇ, ನೀನು ಹೇರಳವಾಗಿ ಮಳೆಸುರಿಸಿ, [QE][QS]ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ. [QE]
10. [QS]ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು. [QE][QS]ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ. [QE]
11. [QS]ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು. [QE]
12. [QS]ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; [QE][QS]ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ. [QE]
13. [QS] [† ಇದು ಸ್ತ್ರೀಯರು ಕೊಳ್ಳೆಯನ್ನು ತಮ್ಮಲ್ಲಿ ಹಂಚಿಕೊಳ್ಳುತ್ತಿರುವ ವಿವರಣೆಯಾಗಿದೆ. ಪಾರಿವಾಳವು ಇಸ್ರಾಯೇಲಿನ ಸಂಕೇತವಾಗಿದೆ. ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವವರಿಗಾಗಿಯೂ ಸಹ ಬೆಳ್ಳಿಯಿಂದ ಆವರಿಸಿರುವ ಪಾರಿವಾಳದ ರೆಕ್ಕೆಗಳು, ಚೊಕ್ಕ ಬಂಗಾರದಿಂದ ಆವರಿಸಿರುವ ಅದರ ಗರಿಗಳು ಇವೆ. ]ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? [QE][QS]ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, [QE][QS]ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ. [QE]
14. [QS]ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, [QE][QS]ಸಲ್ಮೋನಿನ ಮೇಲೆ ಹಿಮವು ಬಿದ್ದಿತು. [QE]
15. [QS]ಬಾಷಾನಿನ ಪರ್ವತವು ಮಹೋನ್ನತವಾಗಿದೆ; [QE][QS]ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ. [QE]
16. [QS]ಎಲೈ, ಶಿಖರೋನ್ನತಪರ್ವತಗಳೇ, [QE][QS]ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು [QE][QS]ನೀವು ಓರೆಗಣ್ಣಿನಿಂದ ನೋಡುವುದೇಕೆ? [QE][QS]ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು. [QE]
17. [QS]ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. [QE][QS]ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, [QE][QS]ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ[‡ ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ ಅಥವಾ ಯೆಹೋವನು ಅವರ ಮಧ್ಯದಲ್ಲಿ ವಾಸಿಸುತ್ತಾನೆ, ಸೀನಾಯ್ ಬೆಟ್ಟವು ಪವಿತ್ರಸ್ಥಳದಲ್ಲಿದೆ. ]. [QE]
18. [QS]ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, [QE][QS]ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, [QE][QS]ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, [QE][QS]ಉನ್ನತಸ್ಥಾನಕ್ಕೆ ಏರಿದ್ದೀ. [QE]
19. [QS]ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. [QE][QS]ನಮ್ಮನ್ನು ರಕ್ಷಿಸುವ ದೇವರು ಆತನೇ. [QE][QSS]ಸೆಲಾ [QSE]
20. [QS]ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; [QE][QS]ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ. [QE]
21. [QS]ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, [QE][QS]ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು. [QE]
22. [QS]ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ, [QE][QS]ಸಮುದ್ರ ತಳದಿಂದಲೂ ಹಿಡಿದು ತರುವೆನು. [QE]
23. [QS]ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. [QE][QS]ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು” ಎಂದು ನುಡಿದನು. [QE]
24. [QS]ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; [QE][QS]ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ. [QE]
25. [QS]ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, [QE][QS]ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ, [QE]
26. [QS]“ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ. [QE]
27. [QS]ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, [QE][QS]ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, [QE][QS]ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ. [QE]
28. [QS]ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು[§ ಆಜ್ಞಾಪಿಸು ಅಥವಾ ತೋರ್ಪಡಿಸು ]. [QE][QS]ನಿನ್ನ ಮಂದಿರದಲ್ಲಿ ಆಸೀನನಾಗಿ [QE][QS]ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು. [QE]
29. [QS]ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ. [QE]
30. [QS]ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, [QE][QS]ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. [QE][QS]ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. [QE][QS]ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು. [QE]
31. [QS]ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; [QE][QS]ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು. [QE]
32. [QS]ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; [QE][QS]ಕರ್ತನನ್ನು ಸಂಕೀರ್ತಿಸಿರಿ. [QE][QSS]ಸೆಲಾ [QSE]
33. [QS]ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ [QE][QS]ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. [QE][QS]ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು. [QE]
34. [QS]ದೇವರ ಪ್ರತಾಪವನ್ನು ಕೊಂಡಾಡಿರಿ. [QE][QS]ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; [QE][QS]ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ. [QE]
35. [QS]ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. [QE][QS]ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. [QE][QS]ದೇವರಿಗೆ ಸ್ತೋತ್ರ. [QE]