3. {#3ಸ್ವರಕ್ಷಣೆ ಮತ್ತು ವೈರಿಶಿಕ್ಷೆಗಾಗಿ ಭಕ್ತನ ವಿಜ್ಞಾಪನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. [BR]ಕೀರ್ತ 22; 35; 40; 45 *[PE][QS]ದೇವರೇ, ರಕ್ಷಿಸು; [QE][QS]ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ. [QE]
2. [QS]ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. [QE][QS]ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; [QE][QS]ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ. [QE]
3. [QS]ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; [QE][QS]ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ. [QE]
4. [QS]ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; [QE][QS]ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. [QE][QS]ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ. [QE]
5. [QS]ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; [QE][QS]ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ. [QE]
6. [QS]ಸೇನಾಧೀಶ್ವರನೇ, ಯೆಹೋವನೇ, [QE][QS]ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; [QE][QS]ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು [QE][QS]ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ. [QE]
7. [QS]ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; [QE][QS]ನಾಚಿಕೆಯು ನನ್ನ ಮುಖವನ್ನು ಕವಿದಿದೆ. [QE]
8. [QS]ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; [QE][QS]ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ. [QE]
9. [QS]ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. [QE][QS]ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ. [QE]
10. [QS] [* ಕೆಲವು ಹಸ್ತಪ್ರತಿಗಳಲ್ಲಿ ನಾನು ನನ್ನನ್ನು ಉಪವಾಸದಿಂದ ತಗ್ಗಿಸಿಕೊಂಡಿದ್ದೇನೆ ಎಂದು ಇದೆ. ]ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, [QE][QS]ಪರಿಹಾಸ್ಯಕ್ಕೆ ಕಾರಣವಾಯಿತು. [QE]
11. [QS]ನಾನು ಗೋಣಿತಟ್ಟು ಕಟ್ಟಿಕೊಂಡದ್ದು, [QE][QS]ಅವರ ಗಾದೆಗೆ ಆಸ್ಪದವಾಯಿತು. [QE]
12. [QS]ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. [QE][QS]ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ. [QE]
13. [QS]ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; [QE][QS]ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, [QE][QS]ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು. [QE]
14. [QS]ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; [QE][QS]ವೈರಿಗಳ ಕೈಯೊಳಗಿಂದ ಬಿಡಿಸು; [QE][QS]ಮಹಾಜಲರಾಶಿಯಿಂದ ಎಳೆದುಕೋ. [QE]
15. [QS]ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; [QE][QS]ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; [QE][QS]ಪಾತಾಳವು ನನ್ನನ್ನು ನುಂಗದಿರಲಿ. [QE]
16. [QS]ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; [QE][QS]ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. [QE][QS]ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು. [QE]
17. [QS]ನಿನ್ನ ದಾಸನಿಗೆ ವಿಮುಖನಾಗಬೇಡ, [QE][QS]ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು. [QE]
18. [QS]ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. [QE][QS]ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು. [QE]
19. [QS]ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; [QE][QS]ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ. [QE]
20. [QS]ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. [QE][QS]ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. [QE][QS]ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ. [QE]
21. [QS]ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, [QE][QS]ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು. [QE]
22. [QS] [† ಕೆಲವು ಹಸ್ತಪ್ರತಿಗಳಲ್ಲಿ ಅವರ ಯಜ್ಞಸಮರ್ಪಿತ ಊಟವು ಅವರ ಸ್ನೇಹಿತರಿಗೆ ಉರುಲಾಗಿರಲಿ. ]ಅವರ ಸಂಪತ್ತು ಅವರಿಗೆ ಉರುಲಾಗಲಿ; [QE][QS]ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ. [QE]
23. [QS]ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; [QE][QS]ಅವರ ನಡುವು ಯಾವಾಗಲೂ ನಡಗುತ್ತಿರಲಿ. [QE]
24. [QS]ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; [QE][QS]ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ. [QE]
25. [QS]ಅವರ ಪಾಳೆಯವು ಹಾಳುಬೀಳಲಿ; [QE][QS]ಅವರ ನಿವಾಸಗಳು ಜನಶೂನ್ಯವಾಗಲಿ. [QE]
26. [QS]ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; [QE][QS]ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ. [QE]
27. [QS]ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. [QE][QS]ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ. [QE]
28. [QS]ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, [QE][QS]ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ. [QE]
29. [QS]ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, [QE][QS]ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು. [QE]
30. [QS]ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; [QE][QS]ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು. [QE]
31. [QS]ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, [QE][QS]ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು. [QE]
32. [QS]ದೀನರು ಇದನ್ನು ನೋಡಿ ಹರ್ಷಿಸುವರು. [QE][QS]ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ. [QE]
33. [QS]ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; [QE][QS]ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ. [QE]
34. [QS]ಭೂಮ್ಯಾಕಾಶಗಳೂ, ಸಮುದ್ರಗಳೂ, [QE][QS]ಜಲಚರಗಳೂ ಆತನನ್ನು ಕೊಂಡಾಡಲಿ. [QE]
35. [QS]ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, [QE][QS]ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; [QE][QS]ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು. [QE]
36. [QS]ಅವರ ಸಂತತಿಗೇ ಅದರ ಹಕ್ಕಿರುವುದು; [QE][QS]ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು. [QE]