1. ದೇವರೇ, ರಕ್ಷಿಸು; [QBR] ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ. [QBR]
2. ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. [QBR] ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; [QBR] ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ. [QBR]
3. ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; [QBR] ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ. [QBR]
4. ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; [QBR] ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. [QBR] ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ. [QBR]
5. ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; [QBR] ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ. [QBR]
6. ಸೇನಾಧೀಶ್ವರನೇ, ಯೆಹೋವನೇ, [QBR] ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; [QBR] ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು [QBR] ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ. [QBR]
7. ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; [QBR] ನಾಚಿಕೆಯು ನನ್ನ ಮುಖವನ್ನು ಕವಿದಿದೆ. [QBR]
8. ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; [QBR] ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ. [QBR]
9. ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. [QBR] ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ. [QBR]
10. [* ಕೆಲವು ಹಸ್ತಪ್ರತಿಗಳಲ್ಲಿ ನಾನು ನನ್ನನ್ನು ಉಪವಾಸದಿಂದ ತಗ್ಗಿಸಿಕೊಂಡಿದ್ದೇನೆ ಎಂದು ಇದೆ.] ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, [QBR] ಪರಿಹಾಸ್ಯಕ್ಕೆ ಕಾರಣವಾಯಿತು. [QBR]
11. ನಾನು ಗೋಣಿತಟ್ಟು ಕಟ್ಟಿಕೊಂಡದ್ದು, [QBR] ಅವರ ಗಾದೆಗೆ ಆಸ್ಪದವಾಯಿತು. [QBR]
12. ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. [QBR] ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ. [QBR]
13. ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; [QBR] ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, [QBR] ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು. [QBR]
14. ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; [QBR] ವೈರಿಗಳ ಕೈಯೊಳಗಿಂದ ಬಿಡಿಸು; [QBR] ಮಹಾಜಲರಾಶಿಯಿಂದ ಎಳೆದುಕೋ. [QBR]
15. ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; [QBR] ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; [QBR] ಪಾತಾಳವು ನನ್ನನ್ನು ನುಂಗದಿರಲಿ. [QBR]
16. ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; [QBR] ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. [QBR] ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು. [QBR]
17. ನಿನ್ನ ದಾಸನಿಗೆ ವಿಮುಖನಾಗಬೇಡ, [QBR] ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು. [QBR]
18. ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. [QBR] ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು. [QBR]
19. ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; [QBR] ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ. [QBR]
20. ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. [QBR] ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. [QBR] ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ. [QBR]
21. ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, [QBR] ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು. [QBR]
22. [† ಕೆಲವು ಹಸ್ತಪ್ರತಿಗಳಲ್ಲಿ ಅವರ ಯಜ್ಞಸಮರ್ಪಿತ ಊಟವು ಅವರ ಸ್ನೇಹಿತರಿಗೆ ಉರುಲಾಗಿರಲಿ.] ಅವರ ಸಂಪತ್ತು ಅವರಿಗೆ ಉರುಲಾಗಲಿ; [QBR] ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ. [QBR]
23. ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; [QBR] ಅವರ ನಡುವು ಯಾವಾಗಲೂ ನಡಗುತ್ತಿರಲಿ. [QBR]
24. ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; [QBR] ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ. [QBR]
25. ಅವರ ಪಾಳೆಯವು ಹಾಳುಬೀಳಲಿ; [QBR] ಅವರ ನಿವಾಸಗಳು ಜನಶೂನ್ಯವಾಗಲಿ. [QBR]
26. ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; [QBR] ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ. [QBR]
27. ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. [QBR] ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ. [QBR]
28. ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, [QBR] ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ. [QBR]
29. ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, [QBR] ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು. [QBR]
30. ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; [QBR] ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು. [QBR]
31. ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, [QBR] ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು. [QBR]
32. ದೀನರು ಇದನ್ನು ನೋಡಿ ಹರ್ಷಿಸುವರು. [QBR] ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ. [QBR]
33. ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; [QBR] ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ. [QBR]
34. ಭೂಮ್ಯಾಕಾಶಗಳೂ, ಸಮುದ್ರಗಳೂ, [QBR] ಜಲಚರಗಳೂ ಆತನನ್ನು ಕೊಂಡಾಡಲಿ. [QBR]
35. ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, [QBR] ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; [QBR] ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು. [QBR]
36. ಅವರ ಸಂತತಿಗೇ ಅದರ ಹಕ್ಕಿರುವುದು; [QBR] ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು. [PE]