3. {#3ಅನ್ಯಾಯವಾದ ದೋಷಾರೋಪಣೆಗೆ ಗುರಿಯಾದ ದೇವಭಕ್ತನು ಪ್ರಾರ್ಥಿಸುವುದು }[PS]*ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. *[PE][QS]ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; [QE][QS]ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು. [QE]
2. [QS]ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, [QE][QS]ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು. [QE]
3. [QS]ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ, [QE]
4. [QS]ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, [QE][QS]ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ; [QE]
5. [QS]ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; [QE][QS]ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. [QE][QSS]ಸೆಲಾ [QSE]
6. [QS]ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. [QE][QS]ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು. [QE]
7. [QS]ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ [QE][QS]ನೀನು ಪುನಃ ಆರೋಹಣಮಾಡು. [QE]
8. [QS]ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. [QE][QS]ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. [QE]
9. [QS]ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ [QE][QS]ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, [QE][QS]ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; [QE][QS]ನೀತಿವಂತರನ್ನು ದೃಢಪಡಿಸು. [QE]
10. [QS]ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; [QE][QS]ಆತನು ಯಥಾರ್ಥರನ್ನು ಕಾಪಾಡುತ್ತಾನೆ. [QE]
11. [QS]ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; [QE][QS]ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು. [QE]
12. [QS]ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ [QE][QS]ಆತನು ತನ್ನ ಕತ್ತಿಯನ್ನು ಮಸೆಯುವನು. [QE][QS]ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ. [QE]
13. [QS]ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ [QE][QS]ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ. [QE]
14. [QS]ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; [QE][QS]ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, [QE][QS]ಶೂನ್ಯವನ್ನೇ ಹೆತ್ತನು ನೋಡಿರಿ. [QE]
15. [QS]ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, [QE][QS]ಅದರೊಳಗೆ ತಾನೇ ಬಿದ್ದುಹೋದನಲ್ಲಾ. [QE]
16. [QS]ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; [QE][QS]ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು. [QE]
17. [QS]ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, [QE][QS]ನಾನು ಆತನನ್ನು ಕೊಂಡಾಡುವೆನು. [QE][QS]ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು. [QE]