ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಅನ್ಯಾಯವಾದ ದೋಷಾರೋಪಣೆಗೆ ಗುರಿಯಾದ ದೇವಭಕ್ತನು ಪ್ರಾರ್ಥಿಸುವುದು }[PS]*ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. *[PE][QS]ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; [QE][QS]ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು. [QE]
2. [QS]ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, [QE][QS]ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು. [QE]
3. [QS]ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ, [QE]
4. [QS]ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, [QE][QS]ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ; [QE]
5. [QS]ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; [QE][QS]ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. [QE][QSS]ಸೆಲಾ [QSE]
6. [QS]ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. [QE][QS]ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು. [QE]
7. [QS]ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ [QE][QS]ನೀನು ಪುನಃ ಆರೋಹಣಮಾಡು. [QE]
8. [QS]ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. [QE][QS]ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. [QE]
9. [QS]ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ [QE][QS]ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, [QE][QS]ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; [QE][QS]ನೀತಿವಂತರನ್ನು ದೃಢಪಡಿಸು. [QE]
10. [QS]ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; [QE][QS]ಆತನು ಯಥಾರ್ಥರನ್ನು ಕಾಪಾಡುತ್ತಾನೆ. [QE]
11. [QS]ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; [QE][QS]ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು. [QE]
12. [QS]ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ [QE][QS]ಆತನು ತನ್ನ ಕತ್ತಿಯನ್ನು ಮಸೆಯುವನು. [QE][QS]ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ. [QE]
13. [QS]ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ [QE][QS]ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ. [QE]
14. [QS]ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; [QE][QS]ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, [QE][QS]ಶೂನ್ಯವನ್ನೇ ಹೆತ್ತನು ನೋಡಿರಿ. [QE]
15. [QS]ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, [QE][QS]ಅದರೊಳಗೆ ತಾನೇ ಬಿದ್ದುಹೋದನಲ್ಲಾ. [QE]
16. [QS]ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; [QE][QS]ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು. [QE]
17. [QS]ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, [QE][QS]ನಾನು ಆತನನ್ನು ಕೊಂಡಾಡುವೆನು. [QE][QS]ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 150
ಅನ್ಯಾಯವಾದ ದೋಷಾರೋಪಣೆಗೆ ಗುರಿಯಾದ ದೇವಭಕ್ತನು ಪ್ರಾರ್ಥಿಸುವುದು 3 ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು. 2 ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು. 3 ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ, 4 ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ; 5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. QSS ಸೆಲಾ SE 6 ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು. 7 ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು. 8 ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. 9 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು. 10 ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ. 11 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು. 12 ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ. 13 ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ. 14 ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ. 15 ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ. 16 ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು. 17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 150
×

Alert

×

Kannada Letters Keypad References