6. ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು.
ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು. |
8. ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ.
ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. |
9. ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ
ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು. |
12. ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ
ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ. |
14. ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ;
ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ. |
16. ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು;
ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು. |
17. ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ,
ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು. PE |