1. {#3ವೃದ್ಧಾಪ್ಯದ ಪ್ರಾರ್ಥನೆ } [QS]ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; [QE][QS]ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ. [QE]
2. [QS]ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; [QE][QS]ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು. [QE]
3. [QS]ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; [QE][QS]ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. [QE][QS]ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ. [QE]
4. [QS]ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, [QE][QS]ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು. [QE]
5. [QS]ಕರ್ತನಾದ ಯೆಹೋವನೇ, [QE][QS]ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ? [QE]
6. [QS]ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. [QE][QS]ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. [QE][QS]ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ. [QE]
7. [QS]ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; [QE][QS]ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ. [QE]
8. [QS]ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; [QE][QS]ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು. [QE]
9. [QS]ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; [QE][QS]ನನ್ನ ಬಲವು ಕುಂದಿದಾಗ ಕೈಬಿಡಬೇಡ. [QE]
10. [QS]ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ, [QE]
11. [QS]“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; [QE][QS]ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. [QE]
12. [QS]ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು. [QE]
13. [QS]ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; [QE][QS]ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ. [QE]
14. [QS]ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; [QE][QS]ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು. [QE]
15. [QS]ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; [QE][QS]ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ. [QE]
16. [QS]ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ [QE][QS]ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು. [QE]
17. [QS]ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. [QE][QS]ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ. [QE]
18. [QS]ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; [QE][QS]ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, [QE][QS]ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು. [QE]
19. [QS]ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. [QE][QS]ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು? [QE]
20. [QS]ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; [QE][QS]ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು. [QE]
21. [QS]ನನ್ನ ಗೌರವವನ್ನು ಹೆಚ್ಚಿಸು; [QE][QS]ನನಗೆ ಅಭಿಮುಖನಾಗಿ ಸಂತೈಸು. [QE]
22. [QS]ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; [QE][QS]ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. [QE][QS]ಇಸ್ರಾಯೇಲರ ಪರಿಶುದ್ಧ ದೇವರು, [QE][QS]ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು. [QE]
23. [QS]ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ [QE][QS]ನಿನ್ನನ್ನು ಹಾಡಿಹರಸುವವು. [QE]
24. [QS]ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. [QE][QS]ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು. [QE]