3. ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು;
ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ. |
6. ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ.
ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ. |
13. ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ;
ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ. |
15. ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು;
ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ. |
16. ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ
ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು. |
17. ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ.
ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ. |
18. ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ;
ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು. |
19. ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ.
ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು? |
20. ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು;
ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು. |
22. ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು;
ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು. |
24. ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ.
ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು. PE |