ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; [QBR] ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು. [QBR]
2. ಅವನು ನಿನ್ನ ಜನರಿಗೆ ನೀತಿಯಿಂದಲೂ, [QBR] ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ. [QBR]
3. ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, [QBR] ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ. [QBR]
4. ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; [QBR] ದೀನರ ಮಕ್ಕಳನ್ನು ಉದ್ಧರಿಸಲಿ; [QBR] ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ. [QBR]
5. ಸೂರ್ಯನು, ಚಂದ್ರನು ಇರುವವರೆಗೂ, [QBR] ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, [QBR] [* ತಲಲಾಂತರಗಳವರೆಲ್ಲರು ನಿನಗೆ ಭಯಪಡಲಿ.] ತಲತಲಾಂತರಗಳವರೆಗೂ ಅವನು ಜೀವಿಸುವನು. [QBR]
6. ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, [QBR] ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ. [QBR]
7. ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ [† ನೀತಿಯು ವೃದ್ಧಿಯಾಗಲಿ ಅಥವಾ ನೀತಿವಂತರು ವೃದ್ಧಿಯಾಗಲಿ.] ; [QBR] ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. [QBR]
8. ಅವನು ಸಮುದ್ರದಿಂದ ಸಮುದ್ರದ ವರೆಗೂ, [QBR] ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ. [QBR]
9. ಅರಣ್ಯವಾಸಿಗಳು [‡ ಅರಣ್ಯವಾಸಿಗಳು ಅಥವಾ ಅವನ ಶತ್ರುಗಳು.] ಅವನಿಗೆ ಅಡ್ಡಬೀಳಲಿ; [QBR] ಅವನ ವೈರಿಗಳು ಮಣ್ಣುಮುಕ್ಕಲಿ. [QBR]
10. ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; [QBR] ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ. [QBR]
11. ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; [QBR] ಸರ್ವಜನಾಂಗಗಳು ಆತನನ್ನು ಸೇವಿಸಲಿ. [QBR]
12. ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, [QBR] ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು. [QBR]
13. ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. [QBR]
14. ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; [QBR] ಅವರ ಜೀವವು [§ ಅವರ ಜೀವವು ಅಥವಾ ಅವರ ರಕ್ತವು.] ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು. [QBR]
15. ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. [QBR] ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; [QBR] ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ. [QBR]
16. ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; [QBR] ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. [QBR] ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ. [QBR]
17. ಅವನ ನಾಮವು ಸ್ಥಿರವಾಗಿರಲಿ; [QBR] ಅವನ ಹೆಸರು ಸೂರ್ಯನಿರುವವರೆಗೆ ಇರಲಿ. [QBR] ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, [QBR] ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. [QBR]
18. ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, [QBR] ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. [QBR]
19. ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; [QBR] ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್. [QBR]
20. ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ. [PE]

Notes

No Verse Added

Total 150 Chapters, Current Chapter 72 of Total Chapters 150
ಕೀರ್ತನೆಗಳು 72
1. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು;
ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
2. ಅವನು ನಿನ್ನ ಜನರಿಗೆ ನೀತಿಯಿಂದಲೂ,
ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.
3. ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ,
ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.
4. ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ;
ದೀನರ ಮಕ್ಕಳನ್ನು ಉದ್ಧರಿಸಲಿ;
ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
5. ಸೂರ್ಯನು, ಚಂದ್ರನು ಇರುವವರೆಗೂ,
ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ,
* ತಲಲಾಂತರಗಳವರೆಲ್ಲರು ನಿನಗೆ ಭಯಪಡಲಿ. ತಲತಲಾಂತರಗಳವರೆಗೂ ಅವನು ಜೀವಿಸುವನು.
6. ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ,
ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
7. ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ ನೀತಿಯು ವೃದ್ಧಿಯಾಗಲಿ ಅಥವಾ ನೀತಿವಂತರು ವೃದ್ಧಿಯಾಗಲಿ. ;
ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.
8. ಅವನು ಸಮುದ್ರದಿಂದ ಸಮುದ್ರದ ವರೆಗೂ,
ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
9. ಅರಣ್ಯವಾಸಿಗಳು ಅರಣ್ಯವಾಸಿಗಳು ಅಥವಾ ಅವನ ಶತ್ರುಗಳು. ಅವನಿಗೆ ಅಡ್ಡಬೀಳಲಿ;
ಅವನ ವೈರಿಗಳು ಮಣ್ಣುಮುಕ್ಕಲಿ.
10. ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ;
ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
11. ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ;
ಸರ್ವಜನಾಂಗಗಳು ಆತನನ್ನು ಸೇವಿಸಲಿ.
12. ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ,
ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
13. ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
14. ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು;
ಅವರ ಜೀವವು § ಅವರ ಜೀವವು ಅಥವಾ ಅವರ ರಕ್ತವು. ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
15. ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ.
ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ;
ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
16. ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ;
ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ.
ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
17. ಅವನ ನಾಮವು ಸ್ಥಿರವಾಗಿರಲಿ;
ಅವನ ಹೆಸರು ಸೂರ್ಯನಿರುವವರೆಗೆ ಇರಲಿ.
ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ,
ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
18. ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ,
ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.
19. ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ;
ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
20. ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ. PE
Total 150 Chapters, Current Chapter 72 of Total Chapters 150
×

Alert

×

kannada Letters Keypad References