3. {#3ರಾಜಾಶೀರ್ವಾದ }[PS]*ಸೊಲೊಮೋನನ ಕೀರ್ತನೆ. [BR]ಕೀರ್ತ 21; 45 *[PE][QS]ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; [QE][QS]ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು. [QE]
2. [QS]ಅವನು ನಿನ್ನ ಜನರಿಗೆ ನೀತಿಯಿಂದಲೂ, [QE][QS]ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ. [QE]
3. [QS]ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, [QE][QS]ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ. [QE]
4. [QS]ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; [QE][QS]ದೀನರ ಮಕ್ಕಳನ್ನು ಉದ್ಧರಿಸಲಿ; [QE][QS]ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ. [QE]
5. [QS]ಸೂರ್ಯನು, ಚಂದ್ರನು ಇರುವವರೆಗೂ, [QE][QS]ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, [QE][QS][* ತಲಲಾಂತರಗಳವರೆಲ್ಲರು ನಿನಗೆ ಭಯಪಡಲಿ. ]ತಲತಲಾಂತರಗಳವರೆಗೂ ಅವನು ಜೀವಿಸುವನು. [QE]
6. [QS]ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, [QE][QS]ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ. [QE]
7. [QS]ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ[† ನೀತಿಯು ವೃದ್ಧಿಯಾಗಲಿ ಅಥವಾ ನೀತಿವಂತರು ವೃದ್ಧಿಯಾಗಲಿ. ]; [QE][QS]ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. [QE]
8. [QS]ಅವನು ಸಮುದ್ರದಿಂದ ಸಮುದ್ರದ ವರೆಗೂ, [QE][QS]ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ. [QE]
9. [QS]ಅರಣ್ಯವಾಸಿಗಳು[‡ ಅರಣ್ಯವಾಸಿಗಳು ಅಥವಾ ಅವನ ಶತ್ರುಗಳು. ] ಅವನಿಗೆ ಅಡ್ಡಬೀಳಲಿ; [QE][QS]ಅವನ ವೈರಿಗಳು ಮಣ್ಣುಮುಕ್ಕಲಿ. [QE]
10. [QS]ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; [QE][QS]ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ. [QE]
11. [QS]ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; [QE][QS]ಸರ್ವಜನಾಂಗಗಳು ಆತನನ್ನು ಸೇವಿಸಲಿ. [QE]
12. [QS]ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, [QE][QS]ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು. [QE]
13. [QS]ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. [QE]
14. [QS]ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; [QE][QS]ಅವರ ಜೀವವು[§ ಅವರ ಜೀವವು ಅಥವಾ ಅವರ ರಕ್ತವು. ] ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು. [QE]
15. [QS]ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. [QE][QS]ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; [QE][QS]ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ. [QE]
16. [QS]ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; [QE][QS]ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. [QE][QS]ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ. [QE]
17. [QS]ಅವನ ನಾಮವು ಸ್ಥಿರವಾಗಿರಲಿ; [QE][QS]ಅವನ ಹೆಸರು ಸೂರ್ಯನಿರುವವರೆಗೆ ಇರಲಿ. [QE][QS]ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, [QE][QS]ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. [QE]
18. [QS]ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, [QE][QS]ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. [QE]
19. [QS]ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; [QE][QS]ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್. [QE]
20. [QS]ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ. [QE]