3. {#3ತೃತೀಯ ಭಾಗವು 73-89 }{#1ದುಷ್ಟರ ಸೌಭಾಗ್ಯವನ್ನು ಕಂಡು ವಿಶ್ವಾಸಭ್ರಷ್ಟರಾಗಬಾರದೆಂಬ ಬೋಧನೆ }[PS]*ಆಸಾಫನ ಕೀರ್ತನೆ. [BR]ಕೀರ್ತ 49 *[PE][QS]ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು. [QE]
2. [QS]ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ. [QE]
3. [QS]ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು [QE][QS]ಸೊಕ್ಕಿನವರ ಮೇಲೆ ಉರಿಗೊಂಡೆನು. [QE]
4. [QS]ಅವರ ಮರಣವು ನಿರ್ಬಾಧಕವಾಗಿದೆ; [QE][QS]ಅವರ ದೇಹವು ಕೊಬ್ಬಿದೆ. [QE]
5. [QS]ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; [QE][QS]ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ. [QE]
6. [QS]ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; [QE][QS]ಬಲಾತ್ಕಾರವು ಉಡುಪಾಗಿದೆ. [QE]
7. [QS]ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; [QE][QS]ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ. [QE]
8. [QS]ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; [QE][QS]ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ. [QE]
9. [QS]ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. [QE][QS]ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು. [QE]
10. [QS]ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; [QE][QS][* ಅಥವಾ ಅವರಿಗೆ ಪಾನವು ಯಥೇಚ್ಛವಾಗಿ ದೊರಕುವುದು. ]ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ. [QE]
11. [QS]ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ. [QE]
12. [QS]ನೋಡಿರಿ, ದುಷ್ಟರು ಇಂಥವರೇ; [QE][QS]ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ. [QE]
13. [QS]ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, [QE][QS]ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ. [QE]
14. [QS]ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, [QE][QS]ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ. [QE]
15. [QS]ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, [QE][QS]ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು. [QE]
16. [QS]ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ [QE][QS]ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು. [QE]
17. [QS]ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು. [QE]
18. [QS]ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, [QE][QS]ಬೀಳಿಸಿ, ನಾಶಮಾಡಿಬಿಡುತ್ತೀ. [QE]
19. [QS]ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; [QE][QS]ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ. [QE]
20. [QS]ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ [QE][QS]ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ. [QE]
21. [QS]ನನ್ನ ಮನಸ್ಸು ನೊಂದುಹೋಗಿತ್ತು; [QE][QS]ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು. [QE]
22. [QS]ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, [QE][QS]ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು. [QE]
23. [QS]ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. [QE][QS]ನೀನು ನನ್ನ ಬಲಗೈಯನ್ನು ಹಿಡಿದು, [QE]
24. [QS]ನಿನ್ನ ಚಿತ್ತವನ್ನು ತಿಳಿಯಪಡಿಸಿ, [QE][QS]ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ. [QE]
25. [QS]ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? [QE][QS]ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ. [QE]
26. [QS]ತನುಮನಗಳು ಕ್ಷಯಿಸಿದರೂ [QE][QS]ನನ್ನ ಆತ್ಮಕ್ಕೆ ಬಲವು[† ಬಲವು ಅಥವಾ ಬಂಡೆ. ] [QE][QS]ನನ್ನ ಶಾಶ್ವತವಾದ ಪಾಲೂ ದೇವರೇ. [QE]
27. [QS]ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; [QE][QS]ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ. [QE]
28. [QS]ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. [QE][QS]ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ [QE][QS]ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು. [QE]