3. {#3ದೇವಾಲಯವನ್ನು ಹಾಳುಮಾಡಿದ ಶತ್ರುಗಳನ್ನು ತಗ್ಗಿಸಬೇಕೆಂಬ ಪ್ರಾರ್ಥನೆ }[PS]*ಆಸಾಫನ ಪದ್ಯ. [BR]ಕೀರ್ತ 79 *[PE][QS]ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? [QE][QS]ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ? [QE]
2. [QS]ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು [QE][QS]ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; [QE][QS]ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ. [QE]
3. [QS]ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. [QE][QS]ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ. [QE]
4. [QS]ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; [QE][QS]ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ. [QE]
5. [QS]ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ. [QE]
6. [QS]ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, [QE][QS]ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ. [QE]
7. [QS]ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, [QE][QS]ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ. [QE]
8. [QS]“ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; [QE][QS]ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ. [QE]
9. [QS]ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. [QE][QS]ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; [QE][QS]ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ. [QE]
10. [QS]ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? [QE][QS]ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ? [QE]
11. [QS]ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? [QE][QS]ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು. [QE]
12. [QS]ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, [QE][QS]ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ? [QE]
13. [QS]ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; [QE][QS]ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು. [QE]
14. [QS]ಲಿವ್ಯಾತಾನನ[* ಲಿವ್ಯಾತಾನನ ಲಿವ್ಯಾತಾನ್ (104:26; ಯೆಶಾ 27:1) ಎಂಬುದು ಪೌರಾಣಿಕ ಘಟಸರ್ಪದ ಹೆಸರಾಗಿದೆ, ಇತರ ಸ್ಥಳಗಳಲ್ಲಿ ಬೇರೆ ಹೆಸರಿನಿಂದ ಕರೆಯಲ್ಪಟ್ಟಿದೆ. ಇದು ಅನೇಕ ತಲೆಗಳನ್ನು ಹೊಂದಿದೆಯೆಂದು ಭಾವಿಸಲಾಗಿದೆ. ಕೆಲವೊಮ್ಮೆ ನೀರಿನಲ್ಲಿರುವ ಘಟಸರ್ಪಗಳನ್ನು “ಕಡಲ ಮಹಾ ಹಾವುಗಳು” ಅಥವಾ “ಸಮುದ್ರದಲ್ಲಿ ವಾಸಿಸುವ ಮಹಾ ಪ್ರಾಣಿಗಳು” ಎಂದು ಅನುವಾದಿಸಲಾಗಿದೆ. ] ಶಿರಚ್ಛೇದನೆಮಾಡಿ, [QE][QS]ಅಡವಿಯ ಮೃಗಸಮುದಾಯಕ್ಕೆ [† ಮೃಗಸಮುದಾಯಕ್ಕೆ ಅಥವಾ ಜನರಿಗೆ. ] ಆಹಾರ ಕೊಟ್ಟವನು ನೀನು. [QE]
15. [QS]ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; [QE][QS]ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು. [QE]
16. [QS]ಹಗಲಿರುಳುಗಳನ್ನು ನೇಮಿಸಿದವನು ನೀನು; [QE][QS]ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು. [QE]
17. [QS]ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; [QE][QS]ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು. [QE]
18. [QS]ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, [QE][QS]ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ. [QE]
19. [QS]ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; [QE][QS]ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ. [QE]
20. [QS]ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. [QE][QS]ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ. [QE]
21. [QS]ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; [QE][QS]ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ. [QE]
22. [QS]ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; [QE][QS]ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ. [QE]
23. [QS]ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, [QE][QS]ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು. [QE]