ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; [QBR] ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು. [QBR]
2. ಸಾಲೇಮಿನಲ್ಲಿ [* ಸಾಲೇಮಿನಲ್ಲಿ ಅಥವಾ ಯೆರೂಸಲೇಮಿನಲ್ಲಿ.] ಆತನ ಬಿಡಾರವಿದೆ; [QBR] ಚೀಯೋನಿನಲ್ಲಿ ಆತನು ವಾಸಿಸುತ್ತಾನೆ. [QBR]
3. ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, [QBR] ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ
4. ನೀನು ತೇಜೋಮಯನು; [QBR] ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು. [QBR]
5. ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; [QBR] ಎಲ್ಲಾ ಶೂರರ ಕೈಗಳು ಬಿದ್ದುಹೋದವು. [QBR]
6. ಯಾಕೋಬ ವಂಶದವರ ದೇವರೇ, [QBR] ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು. [QBR]
7. ನೀನು ಮಹಾಶಕ್ತಿಶಾಲಿ; [QBR] ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು? [QBR]
8. ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ, [QBR]
9. ದೇವರು ಲೋಕದ ದೀನರನ್ನು ರಕ್ಷಿಸಿ, [QBR] ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು [QBR] ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ
10. ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; [QBR] ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ [† ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಅಥವಾ ಯುದ್ಧದ ನಂತರ ಉಳಿದ ಜನರು ನಿನ್ನ ಹಬ್ಬವನ್ನು ಆರಿಸುತ್ತಾರೆ. ] . [QBR]
11. ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; [QBR] ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ. [QBR]
12. ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ [QBR] ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು. [PE]

Notes

No Verse Added

Total 150 Chapters, Current Chapter 76 of Total Chapters 150
ಕೀರ್ತನೆಗಳು 76:12
1. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು;
ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.
2. ಸಾಲೇಮಿನಲ್ಲಿ * ಸಾಲೇಮಿನಲ್ಲಿ ಅಥವಾ ಯೆರೂಸಲೇಮಿನಲ್ಲಿ. ಆತನ ಬಿಡಾರವಿದೆ;
ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
3. ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ,
ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ
4. ನೀನು ತೇಜೋಮಯನು;
ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.
5. ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ;
ಎಲ್ಲಾ ಶೂರರ ಕೈಗಳು ಬಿದ್ದುಹೋದವು.
6. ಯಾಕೋಬ ವಂಶದವರ ದೇವರೇ,
ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.
7. ನೀನು ಮಹಾಶಕ್ತಿಶಾಲಿ;
ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
8. ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
9. ದೇವರು ಲೋಕದ ದೀನರನ್ನು ರಕ್ಷಿಸಿ,
ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು
ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ
10. ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು;
ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಅಥವಾ ಯುದ್ಧದ ನಂತರ ಉಳಿದ ಜನರು ನಿನ್ನ ಹಬ್ಬವನ್ನು ಆರಿಸುತ್ತಾರೆ. .
11. ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ;
ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
12. ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ
ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು. PE
Total 150 Chapters, Current Chapter 76 of Total Chapters 150
×

Alert

×

kannada Letters Keypad References