ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; [QBR] ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು. [QBR]
2. ಸಾಲೇಮಿನಲ್ಲಿ [* ಸಾಲೇಮಿನಲ್ಲಿ ಅಥವಾ ಯೆರೂಸಲೇಮಿನಲ್ಲಿ.] ಆತನ ಬಿಡಾರವಿದೆ; [QBR] ಚೀಯೋನಿನಲ್ಲಿ ಆತನು ವಾಸಿಸುತ್ತಾನೆ. [QBR]
3. ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, [QBR] ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ
4. ನೀನು ತೇಜೋಮಯನು; [QBR] ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು. [QBR]
5. ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; [QBR] ಎಲ್ಲಾ ಶೂರರ ಕೈಗಳು ಬಿದ್ದುಹೋದವು. [QBR]
6. ಯಾಕೋಬ ವಂಶದವರ ದೇವರೇ, [QBR] ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು. [QBR]
7. ನೀನು ಮಹಾಶಕ್ತಿಶಾಲಿ; [QBR] ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು? [QBR]
8. ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ, [QBR]
9. ದೇವರು ಲೋಕದ ದೀನರನ್ನು ರಕ್ಷಿಸಿ, [QBR] ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು [QBR] ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ
10. ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; [QBR] ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ [† ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಅಥವಾ ಯುದ್ಧದ ನಂತರ ಉಳಿದ ಜನರು ನಿನ್ನ ಹಬ್ಬವನ್ನು ಆರಿಸುತ್ತಾರೆ. ] . [QBR]
11. ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; [QBR] ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ. [QBR]
12. ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ [QBR] ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 76 / 150
ಕೀರ್ತನೆಗಳು 76:136
1 ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು. 2 ಸಾಲೇಮಿನಲ್ಲಿ * ಸಾಲೇಮಿನಲ್ಲಿ ಅಥವಾ ಯೆರೂಸಲೇಮಿನಲ್ಲಿ. ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ. 3 ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ 4 ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು. 5 ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು. 6 ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು. 7 ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು? 8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ, 9 ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ 10 ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಅಥವಾ ಯುದ್ಧದ ನಂತರ ಉಳಿದ ಜನರು ನಿನ್ನ ಹಬ್ಬವನ್ನು ಆರಿಸುತ್ತಾರೆ. . 11 ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ. 12 ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 76 / 150
Common Bible Languages
West Indian Languages
×

Alert

×

kannada Letters Keypad References