ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದೇವರ ಮಹತ್ಕಾರ್ಯಗಳ ಧ್ಯಾನ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. *[PE][QS]ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; [QE][QS]ಆತನು ನನಗೆ ಕಿವಿಗೊಡುವನು. [QE]
2. [QS]ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; [QE][QS]ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. [QE][QS]ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು. [QE]
3. [QS]ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; [QE][QS]ಮನಗುಂದಿದವನಾಗಿಯೇ ಹಂಬಲಿಸುವೆನು. [QE]
4. [QS]ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. [QE][QS]ತಳಮಳಗೊಂಡು ಮಾತನಾಡಲಾರದೆ ಇದ್ದೆನು. [QE]
5. [QS]ಹಳೆಯ ದಿನಗಳನ್ನೂ, [QE][QS]ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು. [QE]
6. [QS]ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, [QE][QS]ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು [QE][QS]ನನ್ನ ಮನಸ್ಸಿನಲ್ಲಿ, [QE]
7. [QS]“ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? [QE][QS]ಆತನು ಪುನಃ ಪ್ರಸನ್ನನಾಗುವುದಿಲ್ಲವೋ? [QE]
8. [QS]ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? [QE][QS]ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? [QE]
9. [QS]ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? [QE][QS]ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು [QE][QSS]ಸೆಲಾ [QSE]
10. [QS]ಪುನಃ ನಾನು, [QE][QS]“ಹೀಗೆ ನೆನಸುವುದು ನನ್ನ ಬಲಹೀನತೆಯೇ. [QE][QS]ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು. [QE]
11. [QS]ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; [QE][QS]ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು. [QE]
12. [QS]ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; [QE][QS]ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು. [QE]
13. [QS]ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. [QE][QS]ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು? [QE]
14. [QS]ಅದ್ಭುತಗಳನ್ನು ನಡೆಸುವ ದೇವರು ನೀನೇ; [QE][QS]ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ. [QE]
15. [QS]ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, [QE][QS]ಭುಜಬಲದಿಂದ ಬಿಡುಗಡೆಮಾಡಿದಿ. [QE][QSS]ಸೆಲಾ [QSE]
16. [QS]ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; [QE][QS]ಕಾಣುತ್ತಲೇ ತಳಮಳಗೊಂಡು [QE][QS]ತಳದವರೆಗೂ ಅಲ್ಲಕಲ್ಲೋಲವಾದವು. [QE]
17. [QS]ಮೇಘಮಂಡಲವು ಮಳೆಗರೆಯಿತು; [QE][QS]ಆಕಾಶವು ಗರ್ಜಿಸಿತು; [QE][QS]ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು. [QE]
18. [QS]ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; [QE][QS]ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; [QE][QS]ಭೂಮಿಯು ಅಲ್ಲಾಡಿ ಕಂಪಿಸಿತು. [QE]
19. [QS]ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; [QE][QS]ಮಹಾಜಲರಾಶಿಗಳನ್ನು ದಾಟಿದಿ; [QE][QS]ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ. [QE]
20. [QS]ಕುರುಬನು ಕುರಿಹಿಂಡನ್ನು ಹೇಗೋ, [QE][QS]ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, [QE][QS]ನಿನ್ನ ಪ್ರಜೆಯನ್ನು ಮುನ್ನಡೆಸಿದಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 77 / 150
ದೇವರ ಮಹತ್ಕಾರ್ಯಗಳ ಧ್ಯಾನ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. *ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು. 2 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು. 3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು. 4 ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು. 5 ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು. 6 ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ, 7 “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ? 8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? 9 ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು QSS ಸೆಲಾ SE 10 ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು. 11 ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು. 12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು. 13 ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು? 14 ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ. 15 ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. QSS ಸೆಲಾ SE 16 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು. 17 ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು. 18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು. 19 ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ. 20 ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 77 / 150
×

Alert

×

Kannada Letters Keypad References