ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; [QBR] ಆತನು ನನಗೆ ಕಿವಿಗೊಡುವನು. [QBR]
2. ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; [QBR] ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. [QBR] ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು. [QBR]
3. ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; [QBR] ಮನಗುಂದಿದವನಾಗಿಯೇ ಹಂಬಲಿಸುವೆನು. [QBR]
4. ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. [QBR] ತಳಮಳಗೊಂಡು ಮಾತನಾಡಲಾರದೆ ಇದ್ದೆನು. [QBR]
5. ಹಳೆಯ ದಿನಗಳನ್ನೂ, [QBR] ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು. [QBR]
6. ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, [QBR] ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು [QBR] ನನ್ನ ಮನಸ್ಸಿನಲ್ಲಿ, [QBR]
7. “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? [QBR] ಆತನು ಪುನಃ ಪ್ರಸನ್ನನಾಗುವುದಿಲ್ಲವೋ? [QBR]
8. ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? [QBR] ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? [QBR]
9. ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? [QBR] ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು ಸೆಲಾ
10. ಪುನಃ ನಾನು, [QBR] “ಹೀಗೆ ನೆನಸುವುದು ನನ್ನ ಬಲಹೀನತೆಯೇ. [QBR] ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು. [QBR]
11. ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; [QBR] ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು. [QBR]
12. ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; [QBR] ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು. [QBR]
13. ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. [QBR] ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು? [QBR]
14. ಅದ್ಭುತಗಳನ್ನು ನಡೆಸುವ ದೇವರು ನೀನೇ; [QBR] ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ. [QBR]
15. ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, [QBR] ಭುಜಬಲದಿಂದ ಬಿಡುಗಡೆಮಾಡಿದಿ. ಸೆಲಾ
16. ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; [QBR] ಕಾಣುತ್ತಲೇ ತಳಮಳಗೊಂಡು [QBR] ತಳದವರೆಗೂ ಅಲ್ಲಕಲ್ಲೋಲವಾದವು. [QBR]
17. ಮೇಘಮಂಡಲವು ಮಳೆಗರೆಯಿತು; [QBR] ಆಕಾಶವು ಗರ್ಜಿಸಿತು; [QBR] ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು. [QBR]
18. ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; [QBR] ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; [QBR] ಭೂಮಿಯು ಅಲ್ಲಾಡಿ ಕಂಪಿಸಿತು. [QBR]
19. ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; [QBR] ಮಹಾಜಲರಾಶಿಗಳನ್ನು ದಾಟಿದಿ; [QBR] ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ. [QBR]
20. ಕುರುಬನು ಕುರಿಹಿಂಡನ್ನು ಹೇಗೋ, [QBR] ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, [QBR] ನಿನ್ನ ಪ್ರಜೆಯನ್ನು ಮುನ್ನಡೆಸಿದಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 77 / 150
ಕೀರ್ತನೆಗಳು 77:157
1 ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು. 2 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು. 3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು. 4 ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು. 5 ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು. 6 ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ, 7 “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ? 8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? 9 ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು ಸೆಲಾ 10 ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು. 11 ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು. 12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು. 13 ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು? 14 ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ. 15 ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. ಸೆಲಾ 16 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು. 17 ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು. 18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು. 19 ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ. 20 ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 77 / 150
Common Bible Languages
West Indian Languages
×

Alert

×

kannada Letters Keypad References