3. {#3ಇಸ್ರಾಯೇಲರ ಉಪದೇಶಯುಕ್ತವಾದ ಪೂರ್ವಚರಿತ್ರೆ }[PS]*ಆಸಾಫನ ಪದ್ಯ. [BR]ಕೀರ್ತ 105; 106; ಧರ್ಮೋ 32 *[PE][QS]ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; [QE][QS]ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ. [QE]
2. [QS]ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. [QE][QS]ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು. [QE]
3. [QS]ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, [QE][QS]ಅವರ ಸಂತಾನದವರಿಗೆ ಮರೆಮಾಡದೆ, [QE]
4. [QS]ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, [QE][QS]ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು. [QE]
5. [QS]ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, [QE][QS]ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, [QE][QS]ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ; [QE]
6. [QS]ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, [QE][QS]ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು. [QE]
7. [QS]ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, [QE][QS]ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ, [QE]
8. [QS]ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, [QE][QS]ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ. [QE]
9. [QS]ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, [QE][QS]ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು. [QE]
10. [QS]ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, [QE][QS]ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ. [QE]
11. [QS]ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ [QE][QS]ಅದ್ಭುತಗಳನ್ನು ಮರೆತುಬಿಟ್ಟರು. [QE]
12. [QS]ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, [QE][QS]ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು. [QE]
13. [QS]ಆತನು ಸಮುದ್ರವನ್ನು ವಿಭಾಗಿಸಿ, [QE][QS]ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು. [QE]
14. [QS]ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, [QE][QS]ಆತನು ಅವರನ್ನು ಕರೆದೊಯ್ದನು. [QE]
15. [QS]ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, [QE][QS]ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು. [QE]
16. [QS]ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, [QE][QS]ನದಿಗಳಾಗಿ ಹರಿಯಮಾಡಿದನು. [QE]
17. [QS]ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, [QE][QS]ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು. [QE]
18. [QS]ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, [QE][QS]ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು. [QE]
19. [QS]ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, [QE][QS]“ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? [QE]
20. [QS]ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, [QE][QS]ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? [QE][QS]ಆತನು ರೊಟ್ಟಿಯನ್ನು ಕೊಡಲು ಶಕ್ತನೋ? [QE][QS]ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ. [QE]
21. [QS]ಯೆಹೋವನು ಇದನ್ನು ಕೇಳಿ ರೋಷಗೊಂಡನು. [QE][QS]ಅವರು ದೇವರಲ್ಲಿ ಭರವಸವಿಡದೆಯೂ, [QE][QS]ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ, [QE]
22. [QS]ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; [QE][QS]ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು. [QE]
23. [QS]ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು, [QE]
24. [QS]ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, [QE][QS]ಉಣ್ಣಲಿಕ್ಕೆ ಕೊಟ್ಟನು. [QE]
25. [QS]ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. [QE][QS]ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು. [QE]
26. [QS]ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, [QE][QS]ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು, [QE]
27. [QS]ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; [QE][QS]ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು. [QE]
28. [QS]ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು. [QE]
29. [QS]ಅವರು ತಿಂದು ಸಂತೃಪ್ತರಾದರು; [QE][QS]ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು. [QE]
30. [QS]ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, [QE][QS]ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ, [QE]
31. [QS]ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, [QE][QS]ಅವರಲ್ಲಿ ಕೊಬ್ಬಿದವರನ್ನು ವಧಿಸಿ, [QE][QS]ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು. [QE]
32. [QS]ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; [QE][QS]ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು. [QE]
33. [QS]ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, [QE][QS]ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು. [QE]
34. [QS]ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, [QE][QS]ಪುನಃ ಆತನ ಪ್ರಸನ್ನತೆಯನ್ನು ಬಯಸಿ, [QE]
35. [QS]ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, [QE][QS]ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು. [QE]
36. [QS]ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, [QE][QS]ತಮ್ಮ ನಾಲಿಗೆಯಿಂದ ಸುಳ್ಳಾಡಿದರು. [QE]
37. [QS]ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; [QE][QS]ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ. [QE]
38. [QS]ಆದರೂ ಆತನು ಕರುಣಾಳುವೂ, [QE][QS]ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, [QE][QS]ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು. [QE]
39. [QS]ಅವರು ಮಾಂಸಮಾತ್ರದವರೂ, [QE][QS]ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು. [QE]
40. [QS]ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, [QE][QS]ಅಲ್ಲಿ ಆತನನ್ನು ನೋಯಿಸಿದರು. [QE]
41. [QS]ಆತನನ್ನು ಪದೇಪದೇ ಪರೀಕ್ಷಿಸಿ, [QE][QS]ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು. [QE]
42. [QS]ಅವರು ಆತನ ಭುಜಬಲವನ್ನೂ, [QE][QS]ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ, [QE]
43. [QS]ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, [QE][QS]ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು. [QE]
44. [QS]ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, [QE][QS]ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು. [QE]
45. [QS]ಅವರನ್ನು ನಾಶಮಾಡುವ ವಿಷದ ಹುಳಗಳನ್ನು, [QE][QS]ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು. [QE]
46. [QS]ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, [QE][QS]ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು. [QE]
47. [QS]ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, [QE][QS]ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು. [QE]
48. [QS]ಅವರ ದನಗಳನ್ನು ಕಲ್ಮಳೆಗೂ, [QE][QS]ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು. [QE]
49. [QS]ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, [QE][QS]ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು. [QE]
50. [QS]ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, [QE][QS]ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು. [QE]
51. [QS]ಹಾಮನ ವಂಶದವರ[* ಹಾಮನ ವಂಶದವರ ಅಥವಾ ಹಾಮನ ಡೇರೆಗಳು ಐಗುಪ್ತದ ಬಗ್ಗೆ ಮಾತನಾಡುವ ರೀತಿಯಾಗಿದೆ (ನೋಡಿರಿ 105:23,27; 106:22, ಅಲ್ಲಿ ಐಗುಪ್ತವನ್ನು “ಹಾಮನ ದೇಶ” ಎಂದು ಕರೆಯಲಾಗಿದೆ). ಹಾಮನು, ನೋಹನ ಮಕ್ಕಳಲ್ಲಿ ಒಬ್ಬನಾಗಿದ್ದನು, ಅವನನ್ನು ಐಗುಪ್ತದವರ ಪೂರ್ವಜನೆಂದು ಪರಿಗಣಿಸಲ್ಪಟ್ಟಿದ್ದಾನೆ (ಆದಿ 10:6 ನೋಡಿರಿ). ] ಪ್ರಥಮಫಲವಾಗಿರುವ [QE][QS]ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು. [QE]
52. [QS]ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, [QE][QS]ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು. [QE]
53. [QS]ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; [QE][QS]ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು; [QE]
54. [QS]ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ [QE][QS]ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು. [QE]
55. [QS]ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, [QE][QS]ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, [QE][QS]ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು. [QE]
56. [QS]ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. [QE][QS]ಆತನ ವಿಧಿಗಳನ್ನು ಕೈಗೊಳ್ಳದೆ, [QE]
57. [QS]ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. [QE][QS]ಮೋಸದ ಬಿಲ್ಲಿನಂತೆ ತಿರುಗಿಕೊಂಡರು. [QE]
58. [QS]ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, [QE][QS]ವಿಗ್ರಹಗಳಿಂದ ರೇಗಿಸಿದರು. [QE]
59. [QS]ದೇವರು ಇದನ್ನು ತಿಳಿದು ರೌದ್ರನಾಗಿ [QE][QS]ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು. [QE]
60. [QS]ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, [QE][QS]ಶಿಲೋವ್[† ಶಿಲೋವ್ ಶಿಲೋವ್ ಎಫ್ರಾಯೀಮ್ ಕುಲದ ಪ್ರದೇಶದಲ್ಲಿರುವ ಪಟ್ಟಣವಾಗಿದೆ, ಯೆರೂಸಲೇಮಿನ ಉತ್ತರ ಭಾಗಕ್ಕೆ 32 ಕಿಲೋಮೀಟರ್ ದೂರವಿದೆ, ಇಸ್ರಾಯೇಲಿನ ಇತಿಹಾಸದ ಆರಂಭಿಕ ದಿನಗಳಲ್ಲಿ ಮಂಜೂಷ ಪೆಟ್ಟಿಗೆಯನ್ನು ಅಲ್ಲಿ ಇಡಲಾಗಿತ್ತು (ಯೆಹೋ. 18:1; 1 ಸಮು 1:3 ನೋಡಿರಿ). ] ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು [‡ ನಿವಾಸಸ್ಥಾನವನ್ನು ಅಥವಾ ಗುಡಾರವನ್ನು. ] ತ್ಯಜಿಸಿಬಿಟ್ಟು, [QE]
61. [QS]ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, [QE][QS]ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು. [QE]
62. [QS]ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, [QE][QS]ತನ್ನ ಬಾಧ್ಯತೆಯ ಮೇಲೆ ಉಗ್ರನಾದನು. [QE]
63. [QS]ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; [QE][QS]ಅವರ ಕನ್ಯೆಯರು ವಿವಾಹವಾಗಲಿಲ್ಲ. [QE]
64. [QS]ಯಾಜಕರು ಕತ್ತಿಯಿಂದ ಸಂಹೃತರಾದರು; [QE][QS]ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ. [QE]
65. [QS]ಆ ವರೆಗೆ ನಿದ್ರಿಸುವವನಂತೆಯೂ, [QE][QS]ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು, [QE]
66. [QS]ತನ್ನ ಶತ್ರುಗಳನ್ನು ಸದೆಬಡಿದು, [QE][QS]ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು. [QE]
67. [QS]ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, [QE][QS]ಎಫ್ರಾಯೀಮ್ ಕುಲವನ್ನು ತ್ಯಜಿಸಿ, [QE]
68. [QS]ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು. [QE]
69. [QS]ಆತನು ತನ್ನ ಆಲಯವನ್ನು ಪರ್ವತದಂತೆಯೂ, [QE][QS]ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು. [QE]
70. [QS]ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, [QE][QS]ಕುರಿಹಟ್ಟಿಯಿಂದ ತೆಗೆದುಕೊಂಡು, [QE]
71. [QS]ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, [QE][QS]ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ [QE][QS]ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು. [QE]
72. [QS]ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, [QE][QS]ತನ್ನ ಹಸ್ತಕೌಶಲ್ಯದಿಂದ ನಡೆಸಿದನು. [QE]