ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. [QBR] ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. [QBR]
2. ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ [QBR] ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, [QBR] ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ [QBR] ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. [QBR]
3. ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, [QBR] ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, [QBR]
4. ಮನುಷ್ಯನು ಎಷ್ಟು ಮಾತ್ರದವನು, [QBR] ಅವನನ್ನು ನೀನು ಏಕೆ ಸ್ಮರಿಸಬೇಕು? [QBR] ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? [QBR]
5. ಅವನನ್ನು ದೇವರಿಗಿಂತ [* ದೇವರಿಗಿಂತ ಅಥವಾ ದೇವದೂತರಿಗಿಂತ.] ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; [QBR] ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. [QBR]
6. ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ [QBR] [† ಇಬ್ರಿಯ 2:6-9 ಅನ್ನು ನೋಡಿರಿ.] ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. [QBR]
7. ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, [QBR]
8. ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, [QBR] ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, [QBR] ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. [QBR]
9. ನಮ್ಮ ಕರ್ತನಾದ ಯೆಹೋವನೇ, [QBR] ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 150
ಕೀರ್ತನೆಗಳು 8:56
1 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. 2 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. 3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, 4 ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? 5 ಅವನನ್ನು ದೇವರಿಗಿಂತ * ದೇವರಿಗಿಂತ ಅಥವಾ ದೇವದೂತರಿಗಿಂತ. ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. 6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಇಬ್ರಿಯ 2:6-9 ಅನ್ನು ನೋಡಿರಿ. ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. 7 ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, 8 ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. 9 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 150
Common Bible Languages
West Indian Languages
×

Alert

×

kannada Letters Keypad References