ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; [QBR] ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, [QBR] ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು. [QBR]
2. ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, [QBR] ನಿನ್ನ ಶೌರ್ಯವನ್ನು ತೋರ್ಪಡಿಸು; [QBR] ಬಂದು ನಮಗೆ ಜಯಪ್ರದನಾಗು. [QBR]
3. ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. [QBR] ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. [QBR]
4. ಸೇನಾಧೀಶ್ವರನಾದ ಯೆಹೋವ ದೇವರೇ, [QBR] ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ? [QBR]
5. ರೋದನವೇ ಅವರ ಆಹಾರವಾಗುವಂತೆಯೂ, [QBR] ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ. [QBR]
6. ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, [QBR] ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ. [QBR]
7. ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. [QBR] ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. [QBR]
8. ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, [QBR] ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ. [QBR]
9. ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, [QBR] ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು. [QBR]
10. ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. [QBR] ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು. [QBR]
11. ಅದರ ಕೊಂಬೆಗಳು ಸಮುದ್ರದವರೆಗೂ, [QBR] ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು. [QBR]
12. ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? [QBR] ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ. [QBR]
13. ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; [QBR] ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ. [QBR]
14. ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; [QBR] ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು. [QBR]
15. ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು. [QBR]
16. ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. [QBR] ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ. [QBR]
17. ನಿನ್ನ ಬಲಗೈ ಉದ್ಧರಿಸಿದ ಪುರುಷನೂ, [QBR] ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, [QBR] ನಿನ್ನ ಹಸ್ತದಿಂದ ಹಿಡಿದಿರು. [QBR]
18. ಆಗ ನಾವು ನಿನ್ನಿಂದ ಅಗಲುವುದಿಲ್ಲ. [QBR] ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು. [QBR]
19. ಸೇನಾಧೀಶ್ವರನಾದ ಯೆಹೋವ ದೇವರೇ, [QBR] ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; [QBR] ಆಗ ಉದ್ಧಾರವಾಗುವೆವು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 80 / 150
ಕೀರ್ತನೆಗಳು 80:118
1 ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು. 2 ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು. 3 ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. 4 ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ? 5 ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ. 6 ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ. 7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. 8 ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ. 9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು. 10 ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು. 11 ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು. 12 ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ. 13 ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ. 14 ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು. 15 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು. 16 ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ. 17 ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು. 18 ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು. 19 ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 80 / 150
Common Bible Languages
West Indian Languages
×

Alert

×

kannada Letters Keypad References