3. {#3ದ್ರಾಕ್ಷಾಲತೆಯಂತಿರುವ ಇಸ್ರಾಯೇಲರನ್ನು ಪುನಃ ಸ್ಥಾಪಿಸಬೇಕೆಂಬ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಶೋಶನ್ನೀಮ್ ಎದೂತೆಂಬ ರಾಗ. ಆಸಾಫನ ಕೀರ್ತನೆ. *[PE][QS]ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; [QE][QS]ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, [QE][QS]ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು. [QE]
2. [QS]ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, [QE][QS]ನಿನ್ನ ಶೌರ್ಯವನ್ನು ತೋರ್ಪಡಿಸು; [QE][QS]ಬಂದು ನಮಗೆ ಜಯಪ್ರದನಾಗು. [QE]
3. [QS]ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. [QE][QS]ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. [QE]
4. [QS]ಸೇನಾಧೀಶ್ವರನಾದ ಯೆಹೋವ ದೇವರೇ, [QE][QS]ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ? [QE]
5. [QS]ರೋದನವೇ ಅವರ ಆಹಾರವಾಗುವಂತೆಯೂ, [QE][QS]ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ. [QE]
6. [QS]ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, [QE][QS]ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ. [QE]
7. [QS]ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. [QE][QS]ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. [QE]
8. [QS]ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, [QE][QS]ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ. [QE]
9. [QS]ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, [QE][QS]ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು. [QE]
10. [QS]ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. [QE][QS]ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು. [QE]
11. [QS]ಅದರ ಕೊಂಬೆಗಳು ಸಮುದ್ರದವರೆಗೂ, [QE][QS]ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು. [QE]
12. [QS]ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? [QE][QS]ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ. [QE]
13. [QS]ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; [QE][QS]ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ. [QE]
14. [QS]ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; [QE][QS]ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು. [QE]
15. [QS]ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು. [QE]
16. [QS]ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. [QE][QS]ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ. [QE]
17. [QS]ನಿನ್ನ ಬಲಗೈ ಉದ್ಧರಿಸಿದ ಪುರುಷನೂ, [QE][QS]ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, [QE][QS]ನಿನ್ನ ಹಸ್ತದಿಂದ ಹಿಡಿದಿರು. [QE]
18. [QS]ಆಗ ನಾವು ನಿನ್ನಿಂದ ಅಗಲುವುದಿಲ್ಲ. [QE][QS]ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು. [QE]
19. [QS]ಸೇನಾಧೀಶ್ವರನಾದ ಯೆಹೋವ ದೇವರೇ, [QE][QS]ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; [QE][QS]ಆಗ ಉದ್ಧಾರವಾಗುವೆವು. [QE]