3. {#3ದೇವಭಕ್ತಿಯ ವಿಷಯದಲ್ಲಿ ಪ್ರೋತ್ಸಾಹ ಮತ್ತು ಎಚ್ಚರಿಕೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ. [BR]ಧರ್ಮೋ 32; ಕೀರ್ತ 8; 84 *[PE][QS]ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; [QE][QS]ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ. [QE]
2. [QS]ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; [QE][QS]ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ. [QE]
3. [QS]ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ. [QE]
4. [QS]ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; [QE][QS]ಇದು ಯಾಕೋಬ್ಯರ ದೇವರು ವಿಧಿಸಿದ್ದು. [QE]
5. [QS]ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, [QE][QS]ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. [QE][QS]ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ, [QE]
6. [QS]“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; [QE][QS]ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು. [QE]
7. [QS]ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; [QE][QS]ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; [QE][QS]ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. [QE][QSS]ಸೆಲಾ.[QSE]
8. [QS]ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, [QE][QS]ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು, [QE]
9. [QS]ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; [QE][QS]ಪರರ ದೇವತೆಗಳನ್ನು ಪೂಜಿಸಬಾರದು; [QE]
10. [QS]ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; [QE][QS]ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು. [QE]
11. [QS]ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; [QE][QS]ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ. [QE]
12. [QS]ಆದುದರಿಂದ ಇವರು ಹಟಮಾರಿಗಳು; [QE][QS]ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು. [QE]
13. [QS]ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, [QE][QS]ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು! [QE]
14. [QS]ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, [QE][QS]ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು. [QE]
15. [QS]ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; [QE][QS]ಅವರಾದರೋ ಸದಾಕಾಲವೂ ಇರುವರು. [QE]
16. [QS]ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, [QE][QS]ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ. [QE]