ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು} [PS] ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, [QBR] ದೇವರುಗಳೆಂದು [* ದೇವರುಗಳೆಂದು ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು.] ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ. [QBR]
2. “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, [QBR] ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.
3. ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, [QBR] ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. [QBR]
4. ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” [QBR]
5. ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. [QBR] ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ. [QBR]
6. “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, [QBR]
7. ಆದರೂ ನರರಂತೆ ಸತ್ತೇ ಹೋಗುವಿರಿ, [QBR] ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” [QBR] ಎಂದು ನಾನು ಹೇಳಿದೆನು. [QBR]
8. ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. [QBR] ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ? [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 82 / 150
ಕೀರ್ತನೆಗಳು 82:146
ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು 1 ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು * ದೇವರುಗಳೆಂದು ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು. ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ. 2 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ. 3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. 4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” 5 ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ. 6 “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, 7 ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು. 8 ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 82 / 150
Common Bible Languages
West Indian Languages
×

Alert

×

kannada Letters Keypad References