1. ದೇವರೇ, ಸುಮ್ಮನಿರಬೇಡ! [QBR] ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ. [QBR]
2. ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; [QBR] ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ. [QBR]
3. ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, [QBR] ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ, [QBR]
4. “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, [QBR] ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, [QBR] ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ. [QBR]
5. ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, [QBR] ಮೋವಾಬ್ಯರು, ಹಗ್ರೀಯರು, [QBR]
6. ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, [QBR] ಫಿಲಿಷ್ಟಿಯರು, ತೂರ್ ಸಂಸ್ಥಾನದವರು, [QBR]
7. ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, [QBR] ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ; [QBR]
8. ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, [QBR] ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ
9. ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. [QBR] ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, [QBR] ಇವರಿಗೂ ಮಾಡು. [QBR]
10. ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, [QBR] ಹೊಲದ ಗೊಬ್ಬರವಾಗಿ ಹೋದರಲ್ಲಾ. [QBR]
11. ಓರೇಬ್ ಮತ್ತು ಜೇಬ್ ಎಂಬವರ ಗತಿಯು, [QBR] ಇವರ ಶ್ರೀಮಂತರಿಗೂ ಸಂಭವಿಸಲಿ; [QBR] ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ. [QBR]
12. ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” [QBR] ಅಂದುಕೊಳ್ಳುತ್ತಾರಲ್ಲಾ. [QBR]
13. ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, [QBR] ಹಾರಿಹೋಗುವ ಹೊಟ್ಟಿನಂತೆಯೂ ಮಾಡು. [QBR]
14. ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, [QBR] ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು, [QBR]
15. ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; [QBR] ತುಫಾನಿನಿಂದ ಅವರನ್ನು ಕಳವಳಗೊಳಿಸು. [QBR]
16. ನಾಚಿಕೆಯು ಅವರ ಮುಖವನ್ನು ಕವಿಯಲಿ. [QBR] ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು. [QBR]
17. ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; [QBR] ಅಪಮಾನದಿಂದ ನಾಶವಾಗಲಿ. [QBR]
18. ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ [QBR] ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು. [PE]