ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಇಸ್ರಾಯೇಲ್ ವಿರೋಧಿಗಳ ಸೋಲಿಗಾಗಿ ಪ್ರಾರ್ಥನೆ }[PS]*ಆಸಾಫನ ಕೀರ್ತನೆ; ಗೀತೆ. *[PE][QS]ದೇವರೇ, ಸುಮ್ಮನಿರಬೇಡ! [QE][QS]ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ. [QE]
2. [QS]ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; [QE][QS]ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ. [QE]
3. [QS]ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, [QE][QS]ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ, [QE]
4. [QS]“ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, [QE][QS]ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, [QE][QS]ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ. [QE]
5. [QS]ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, [QE][QS]ಮೋವಾಬ್ಯರು, ಹಗ್ರೀಯರು, [QE]
6. [QS]ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, [QE][QS]ಫಿಲಿಷ್ಟಿಯರು, ತೂರ್ ಸಂಸ್ಥಾನದವರು, [QE]
7. [QS]ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, [QE][QS]ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ; [QE]
8. [QS]ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, [QE][QS]ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. [QE][QSS]ಸೆಲಾ[QSE]
9. [QS]ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. [QE][QS]ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, [QE][QS]ಇವರಿಗೂ ಮಾಡು. [QE]
10. [QS]ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, [QE][QS]ಹೊಲದ ಗೊಬ್ಬರವಾಗಿ ಹೋದರಲ್ಲಾ. [QE]
11. [QS]ಓರೇಬ್ ಮತ್ತು ಜೇಬ್ ಎಂಬವರ ಗತಿಯು, [QE][QS]ಇವರ ಶ್ರೀಮಂತರಿಗೂ ಸಂಭವಿಸಲಿ; [QE][QS]ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ. [QE]
12. [QS]ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” [QE][QS]ಅಂದುಕೊಳ್ಳುತ್ತಾರಲ್ಲಾ. [QE]
13. [QS]ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, [QE][QS]ಹಾರಿಹೋಗುವ ಹೊಟ್ಟಿನಂತೆಯೂ ಮಾಡು. [QE]
14. [QS]ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, [QE][QS]ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು, [QE]
15. [QS]ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; [QE][QS]ತುಫಾನಿನಿಂದ ಅವರನ್ನು ಕಳವಳಗೊಳಿಸು. [QE]
16. [QS]ನಾಚಿಕೆಯು ಅವರ ಮುಖವನ್ನು ಕವಿಯಲಿ. [QE][QS]ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು. [QE]
17. [QS]ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; [QE][QS]ಅಪಮಾನದಿಂದ ನಾಶವಾಗಲಿ. [QE]
18. [QS]ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ [QE][QS]ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 83 / 150
ಇಸ್ರಾಯೇಲ್ ವಿರೋಧಿಗಳ ಸೋಲಿಗಾಗಿ ಪ್ರಾರ್ಥನೆ 3 *ಆಸಾಫನ ಕೀರ್ತನೆ; ಗೀತೆ. *ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ. 2 ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ. 3 ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ, 4 “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ. 5 ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು, 6 ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು, 7 ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ; 8 ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. QSS ಸೆಲಾSE 9 ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು. 10 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ. 11 ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ. 12 ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ. 13 ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು. 14 ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು, 15 ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು. 16 ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು. 17 ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ. 18 ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 83 / 150
×

Alert

×

Kannada Letters Keypad References