ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದೇವಾಲಯದ ಯಾತ್ರಿಕರ ಕೀರ್ತನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ. [BR]ಕೀರ್ತ 8; 81 *[PE][QS]ಸೇನಾಧೀಶ್ವರನಾದ ಯೆಹೋವನೇ, [QE][QS]ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! [QE]
2. [QS]ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, [QE][QS]ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [QE][QS]ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ [QE][QS]ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. [QE]
3. [QS]ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, [QE][QS]ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, [QE][QS]ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! [QE]
4. [QS]ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. [QE][QS]ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. [QE][QSS]ಸೆಲಾ[QSE]
5. [QS]ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. [QE][QS]ಅವರು ಯಾತ್ರಿಕರಾಗಿ, [QE]
6. [QS]ಕಣ್ಣೀರಿನ ತಗ್ಗನ್ನು ದಾಟುವಾಗ, [QE][QS]ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. [QE][QS]ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ. [QE]
7. [QS]ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, [QE][QS]ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ, [QE]
8. [QS]“ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; [QE][QS]ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. [QE][QSS]ಸೆಲಾ [QSE]
9. [QS]ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; [QE][QS]ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು. [QE]
10. [QS]ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, [QE][QS]ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. [QE][QS]ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ [QE][QS]ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು. [QE]
11. [QS]ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. [QE][QS]ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; [QE][QS]ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ? [QE]
12. [QS]ಸೇನಾಧೀಶ್ವರನಾದ ಯೆಹೋವನೇ, [QE][QS]ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 84 / 150
ದೇವಾಲಯದ ಯಾತ್ರಿಕರ ಕೀರ್ತನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ.
ಕೀರ್ತ 8; 81 *
ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! 2 ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. 3 ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! 4 ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. QSS ಸೆಲಾSE 5 ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ, 6 ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ. 7 ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ, 8 “ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. QSS ಸೆಲಾ SE 9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು. 10 ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು. 11 ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ? 12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 84 / 150
×

Alert

×

Kannada Letters Keypad References