ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಸಂಪೂರ್ಣ ರಕ್ಷಣೆಯನ್ನು ನಿರೀಕ್ಷಿಸುವ ಭಕ್ತನ ವಿಜ್ಞಾಪನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. *[PE][QS]ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; [QE][QS]ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. [QE]
2. [QS]ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; [QE][QS]ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. [QE][QSS]ಸೆಲಾ [QSE]
3. [QS]ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; [QE][QS]ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. [QE]
4. [QS]ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; [QE][QS]ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. [QE]
5. [QS]ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? [QE][QS]ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? [QE]
6. [QS]ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, [QE][QS]ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? [QE]
7. [QS]ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; [QE][QS]ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. [QE]
8. [QS]ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. [QE][QS]ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. [QE][QS]ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. [QE]
9. [QS]ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. [QE][QS]ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. [QE]
10. [QS]ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; [QE][QS]ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. [QE]
11. [QS]ಸತ್ಯತೆಯು ಭೂಮಿಯಿಂದ ಹುಟ್ಟುವುದು; [QE][QS]ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. [QE]
12. [QS]ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; [QE][QS]ನಮ್ಮ ದೇಶವು ತನ್ನ ಬೆಳೆ ಕೊಡುವುದು. [QE]
13. [QS]ನೀತಿಯು ಆತನ ಮುಂದೆ ಹೋಗುತ್ತಾ, [QE][QS]ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 85 / 150
ಸಂಪೂರ್ಣ ರಕ್ಷಣೆಯನ್ನು ನಿರೀಕ್ಷಿಸುವ ಭಕ್ತನ ವಿಜ್ಞಾಪನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. *ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. 2 ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. QSS ಸೆಲಾ SE 3 ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. 4 ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. 5 ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? 6 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? 7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. 8 ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. 9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. 10 ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. 11 ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. 13 ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 85 / 150
×

Alert

×

Kannada Letters Keypad References