ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; [QBR] ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. [QBR]
2. ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; [QBR] ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ
3. ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; [QBR] ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. [QBR]
4. ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; [QBR] ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. [QBR]
5. ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? [QBR] ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? [QBR]
6. ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, [QBR] ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? [QBR]
7. ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; [QBR] ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. [QBR]
8. ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. [QBR] ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. [QBR] ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. [QBR]
9. ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. [QBR] ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. [QBR]
10. ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; [QBR] ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. [QBR]
11. ಸತ್ಯತೆಯು ಭೂಮಿಯಿಂದ ಹುಟ್ಟುವುದು; [QBR] ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. [QBR]
12. ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; [QBR] ನಮ್ಮ ದೇಶವು ತನ್ನ ಬೆಳೆ ಕೊಡುವುದು. [QBR]
13. ನೀತಿಯು ಆತನ ಮುಂದೆ ಹೋಗುತ್ತಾ, [QBR] ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 85 / 150
ಕೀರ್ತನೆಗಳು 85:54
1 ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. 2 ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ 3 ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. 4 ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. 5 ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? 6 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? 7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. 8 ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. 9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. 10 ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. 11 ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. 13 ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 85 / 150
Common Bible Languages
West Indian Languages
×

Alert

×

kannada Letters Keypad References