3. {#3ಶತ್ರಪೀಡಿತನ ವಿಜ್ಞಾಪನೆ }[PS]*ದಾವೀದನ ಕೀರ್ತನೆ. [BR]ಕೀರ್ತ 25 *[PE][QS]ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; [QE][QS]ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ. [QE]
2. [QS]ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; [QE][QS]ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು. [QE]
3. [QS]ಕರ್ತನೇ, ಕರುಣಿಸು; [QE][QS]ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ. [QE]
4. [QS]ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; [QE][QS]ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. [QE]
5. [QS]ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, [QE][QS]ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ. [QE]
6. [QS]ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; [QE][QS]ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು. [QE]
7. [QS]ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, [QE][QS]ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು. [QE]
8. [QS]ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; [QE][QS]ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ. [QE]
9. [QS]ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, [QE][QS]ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು. [QE]
10. [QS]ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; [QE][QS]ನೀನೊಬ್ಬನೇ ದೇವರು. [QE]
11. [QS]ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; [QE][QS]ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. [QE][QS]ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು. [QE]
12. [QS]ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; [QE][QS]ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು. [QE]
13. [QS]ನೀನು ಬಹಳವಾಗಿ ಕನಿಕರಿಸಿ, [QE][QS]ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. [QE]
14. [QS]ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; [QE][QS]ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. [QE][QS]ಅವರು ನಿನ್ನನ್ನು ಲಕ್ಷಿಸುವುದಿಲ್ಲ. [QE]
15. [QS]ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; [QE][QS]ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು. [QE]
16. [QS]ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; [QE][QS]ನಿನ್ನ ಸೇವಕಳ ಮಗನನ್ನು ರಕ್ಷಿಸು. [QE]
17. [QS]ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; [QE][QS]ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ [QE][QS]ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ. [QE]